ಸೋಮವಾರ, ಏಪ್ರಿಲ್ 10, 2023

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಏ.14ರಂದು ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಏಪ್ರಿಲ್ 14 ರಂದು ಬೆಳಗ್ಗೆ 8 ಕ್ಕೆ ನಗರದ 1ನೇ ಕೌಲ್ ಬಜಾರ್ ಮೋದಲನೇ ಗೇಟ್ ಹತ್ತಿರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರರಾದ ಸತೀಶ್ ಅವರು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ