ಸೋಮವಾರ, ಏಪ್ರಿಲ್ 24, 2023
ಏ.26 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ವ್ಯಾಪ್ತಿಯ 110/11ಕೆ.ವಿ ಸೌತ್ ವಿದ್ಯುತ್ ವಿತರಣಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-47 ಫೀಡರ್‍ನಲ್ಲಿ ತುರ್ತು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಏ.26 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ್‍ಪೇಟೆ, ಬೊಮ್ಮನಾಳ್ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ