ಮಂಗಳವಾರ, ಏಪ್ರಿಲ್ 4, 2023
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ
ಬಳ್ಳಾರಿ,ಏ.4(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರ ನಗರದ ಮೋತಿ ವೃತ್ತದ ಬಳಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂಬಂಧ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಕುರಿತು ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಾಗೃತಿ ಮೂಡಿಸುವ ಜಾಥವು ಮೋತಿ ವೃತ್ತದಿಂದ ಆರಂಭವಾಗಿ ಬ್ಯೂಸ್ ಪೊಲೀಸ್ ಠಾಣೆಯಿಂದ ದೊಡ್ಡ ಮಾರುಕಟ್ಟೆ ಕಣೆಕಲ್ ಬಸ್ ವೃತ್ತದ ಮೂಲಕ ಜಾಥವು ಪಾಲಿಕೆ ಕೊನೆಗೊಂಡಿತ್ತು.
ಜಾಥಾದಲ್ಲಿ ಮತದಾನ ಎಲ್ಲ ಪ್ರಜೆಗಳ ಮೂಲಭೂತ ಕರ್ತವ್ಯ, ನಾಡಿನ ಒಳಿತಿಗಾಗಿ ಕಡ್ಡಾಯವಾಗಿ ಮತ ಚಲಾಯಿಸಿ, ನಿಮ್ಮ ಮತ ಗೌಪ್ಯವಾಗಿರಲಿ, ನಿಮ್ಮ ಉತ್ತಮ ಭವಿಷ್ಯಕ್ಕಾಗಿ ಕಡ್ಡಾಯವಾಗಿ ಮತ ಚಲಾಯಿಸಿ, ನಿಮ್ಮ ಮತ ಅತ್ಯಮೂಲ್ಯವಾದದ್ದು, ಇದನ್ನು ಮಾರಿಕೊಳ್ಳಬೇಡಿ ಎಂಬ ಮಾಹಿತಿ ಫಲಕಗಳು ರಾರಾಜಿಸಿದವು.
ಈ ವೇಳೆ ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕÀ ಪ್ರಮೋದ್ ಅವರು ಸೇರಿತ್ತದೆ ಹಾಗೂ ವಿವಿಧ ಅಧಿಕಾರಿಗಳು ಮತ್ತು ಸ್ವೀಪ್ ಸಮಿತಿ ಅಧಿಕಾರಿಗಳು, ಮಹಾನಗರ ಪಾಲಿಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ