ಮಂಗಳವಾರ, ಏಪ್ರಿಲ್ 25, 2023
ಅಥಿತಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್‍ಸಿ)ಯಲ್ಲಿ ಖಾಲಿ ಇರುವ ಗಣಿತ, ವಿಜ್ಞಾನ ಮತ್ತು ಇಂಗ್ಲೀμï ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್‍ಸಿ)ಯ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 14 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್‍ಸಿ)ಯ ಪ್ರಾಂಶುಪಾಲರ ಕಚೇರಿ ಅವರ ಮೊ.7353346069 ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅವರ ದೂ.08392-200125 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ