ಬುಧವಾರ, ಏಪ್ರಿಲ್ 26, 2023

ಏ.28ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಬಳ್ಳಾರಿ,ಏ.26(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ಕೆಹೆಚ್‍ಬಿ ಲೈನ್ ಹೊಸ ಮಾರ್ಗದ ನಿರ್ಮಾಣ ಕಾರ್ಯ ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 220/110/11 ಕೆ.ವಿ ಅಲ್ಲಿಪುರ ಸ್ವೀಕರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-39 ಅಲ್ಲಿಪುರ ನಗರ ಪ್ರದೇಶ ಫೀಡರ್‍ನ ಅಲ್ಲಿಪುರ, ಬೈಪಾಸ್ ರಸ್ತೆ ಮತ್ತು ಎಫ್-39 ಕೊಳಗಲ್ಲು ಫೀಡರ್‍ನ ಕೊಳಗಲ್ಲು ಗ್ರಾಮದಲ್ಲಿ ಏ.28 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ