ಸೋಮವಾರ, ಏಪ್ರಿಲ್ 24, 2023
ಮತದಾನ ಜಾಗೃತಿ ಅಂಗವಾಗಿ ಹೊನಲು ಬೆಳಕಿನ ಪಂದ್ಯಾವಳಿ ಆಯೋಜನೆ*
*ಸದೃಢ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ: ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್*
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ):
ಸದೃಢ ಆರೋಗ್ಯಕ್ಕೆ ಕ್ರೀಡೆ ಹೇಗೆ ಸಹಕಾರಿಯಾಗಿಯೋ, ಹಾಗೆ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಅವಶ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೆÇಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಬಂಡಿಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಪ್ರಕ್ರಿಯೆಯಿಂದ ಯಾರೂ ಹೊರಗುಳಿಯಬಾರದು. ನಿಮ್ಮ ಮನೆಯ ಅಕ್ಕ ಪಕ್ಕದ ಓಣಿಗಳಲ್ಲಿ ಎಲ್ಲರೂ ಮತದಾನ ಮಾಡುವಂತೆ ತಿಳಿಹೇಳಬೇಕು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಹಲವಾರು ಕಾರ್ಯಕ್ರಮ ನಡೆಸುತ್ತಿವೆ. ಅದೇ ರೀತಿಯಾಗಿ ಯುವಕರಿಗಾಗಿ ಕಬ್ಬಡ್ಡಿ ಪಂದ್ಯಾವಳಿಗಳನ್ನು ಏರ್ಪಡಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ಅಭಿಯಾನ ಮೂಡಿಸುವ ಮತದಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಸಲಾಯಿತು.
ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದವು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಕೆ.ನಟರಾಜ್, ಜಿಪಂ ಯೋಜನಾ ನಿರ್ದೇಶಕ ಪ್ರಮೋದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರೆಹಮತುಲ್ಲಾ ಖಾನ್ ಸೇರಿದಂತೆ ಸ್ವೀಪ್ ಸಮಿತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ