ಸೋಮವಾರ, ಏಪ್ರಿಲ್ 3, 2023

ವ್ಯಕ್ತಿ ಕಾಣೆ; ಪ್ರಕರಣ ದಾಖಲು ಬಳ್ಳಾರಿ,ಏ.3(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲೂಕಿನ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಕೆ.ಸತೀಶ್ ಎನ್ನುವ 39 ವರ್ಷದ ವ್ಯಕ್ತಿಯು ಮಾ.24ರಂದು ಕಾಣೆಯಾಗಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿರುಗುಪ್ಪ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.3 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾμÉ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಮಿಶ್ರಿತ ಅರ್ಧತೋಳಿನ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪಿ.ಎಸ್.ಐ ಪೊಲೀಸ್ ಠಾಣೆಯ ದೂ.08392-220333. ಸಿರುಗುಪ್ಪ ವೃತ್ತದ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ದೂ.08392- 276000, ಬಳ್ಳಾರಿ ಎ.ಪಿ ಅವರ ದೂ.08932-258400 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ