ಮಂಗಳವಾರ, ಏಪ್ರಿಲ್ 11, 2023
ಸರ್ಕಾರಿ, ಖಾಸಗಿ, ಅನುದಾನಿತ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಎನ್.ಸಿ.ವಿ.ಟಿ ಸಂಯೋಜನೆ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ,ಏ.11(ಕರ್ನಾಟಕ ವಾರ್ತೆ): 2023ನೇ ಸಾಲಿನಲ್ಲಿ ಹೊಸ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೆಚ್ಚುವರಿ ವೃತ್ತಿ ಘಟಕಗಳನ್ನು ಪ್ರಾರಂಭಿಸಲು ಎನ್.ಸಿ.ವಿ.ಟಿ ಸಂಯೋಜನೆ ಪಡೆಯಲು ಮತ್ತು ಸ್ಥಳಾಂತರಗೊಂಡ ಸಂಸ್ಥೆಗಳು ಮರು ಸಂಯೋಜನೆ ಪಡೆಯುವ ಸಂಬಂಧ ಡಿ.ಜಿ.ಟಿ ನವದೆಹಲಿಯವರ ನಿಮಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗವಿಶಂಕರ್ ಅವರು ತಿಳಿಸಿದ್ದಾರೆ.
ಹೊಸದಾಗಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬೇಕಾದಲ್ಲಿ ಸಂಸ್ಥೆಯವರು ಕನಿಷ್ಠ ನಾಲ್ಕು ವೃತ್ತಿಗಳಿಗೆ ಎನ್.ಸಿ.ವಿ.ಟಿ ಸಂಯೋಜನೆ ಪಡೆಯಬೇಕಾಗಿರುತ್ತದೆ. ಹಾಗೂ ಡಿ.ಜಿ.ಟಿ ನಿಯಮಾನುಸಾರ ಕಟ್ಟಡ, ವಿದ್ಯುತ, ಯಂತ್ರೋಪಕರಣ, ಸಿಬ್ಬಂದಿ ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕಾಗಿರುತ್ತದೆ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು ಹೆಚ್ಚುವರಿ ವೃತ್ತಿ ಘಟಕಗಳನ್ನು ಪ್ರಾರಂಭಿಸಲು ಕನಿಷ್ಠ 2 ಗ್ರೇಡಿಂಗ್ ಹೊಂದಬೇಕಾಗಿರುತ್ತದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 25 ಆಗಿರುತ್ತದೆ.
ಸಂಯೋಜನೆಗಾಗಿ ನಿಮಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಓo ಔbರಿeಛಿಣ ಅeಡಿಣiಜಿiಛಿಚಿಣe) ಪಡೆಯಬೇಕು.
ಏ.15 ರೊಳಗಾಗಿ ಆಯುಕ್ತಾಲಯಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ