ಸೋಮವಾರ, ಏಪ್ರಿಲ್ 10, 2023
ಮಹಿಳೆ ಕಾಣೆ
ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಘೋರ್ಪಡೆ ಕಾಲೋನಿ ನಿವಾಸಿ ಅಕ್ಕಮ್ಮ ಎನ್ನುವ 65 ವರ್ಷದ ಮಹಿಳೆಯು ಜ.26 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕೋಲುಮುಖ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಸೀರೆ ಮತ್ತು ಬಿಳಿ ಬಣ್ಣದ ಜಾಕೆಟ್ ಧರಿಸಿರುತ್ತಾಳೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಮಾಹಿತಿ ದೊರೆತಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100 ಮೊ.9480803047, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-2258100 ಗೆ ಸಂಪರ್ಕಿಸಬಹುದಾಗಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ