ಮಂಗಳವಾರ, ಏಪ್ರಿಲ್ 18, 2023
ಏ.20ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಏ.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ 1 ಮತ್ತು 2 ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏಪ್ರೀಲ್ 20 ರಂದು ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ ನಗರದ ಇನ್‍ಫ್ಯಾಂಟರಿ ರಸ್ತೆಯ ಆಂಧ್ರಬ್ಯಾಂಕ್ ಪಕ್ಕದ ಶಾಖಾಧಿಕಾರಿಗಳ 6 ಮತ್ತು 9 ರವರ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಕುಂದುಕೊರತೆಗಳಿರುವ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ