ಬುಧವಾರ, ಏಪ್ರಿಲ್ 26, 2023

ಜಿಲ್ಲಾ ಸ್ವೀಪ್ ಸಮಿತಿಯಿಂದ ಏ.27 ರಂದು ಮತದಾನ ಜಾಗೃತಿ ಜಾಥಾ ಬಳ್ಳಾರಿ,ಏ.26(ಕರ್ನಾಟಕ ವಾರ್ತೆ): ವಿಧಾನಸಬಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮೇ 10 ರಂದು ನಡೆಯುವ ಮತದಾನ ದಿನದಂದು 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಏ.27 ರಂದು ಬೆಳಗ್ಗೆ 08 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಚಾಲನೆ ನೀಡುವರು. ಜಾಥಾ ಮಾರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಆವರಣದಿಂದ ಆರಂಭವಾಗಿ ಸಂಗಮ್ ವೃತ್ತ, ಕೆ.ಸಿ ರಸ್ತೆ, ಮೀನಾಕ್ಷಿ ವೃತ್ತ, ನಗರ ಬಸ್ ನಿಲ್ದಾಣ, ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೇ ನಿಲ್ದಾಣ, ಗಡಿಗಿ ಚೆನ್ನಪ್ಪ ವೃತ್ತ, ಸಂಗಮ್ ವೃತ್ತದ ಮೂಲಕ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಆವರಣಕ್ಕೆ ಮುಕ್ತಾಯವಾಗಲಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ