ಸೋಮವಾರ, ಏಪ್ರಿಲ್ 17, 2023
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಏ.19ರಂದು
ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದ ಎಫ್-24 ಮತ್ತು ಎಫ್À-47 ಫೀಡರ್‍ಗಳ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದಿಂದ ಏ.19 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ನಗರದ ಬೆಂಗಳೂರು ರಸ್ತೆ, ಅಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲತೋಟ, ಬಾಪೂಜಿ ನಗರ, ಮಿಲ್ಲರಪೇಟೆ, ರಾಣಿತೋಟ, ಬೊಮ್ಮನಾಳ್‍ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ