ಬುಧವಾರ, ಮೇ 31, 2023
ಅನಾಮಧೇಯ ಮೃತ ವ್ಯಕ್ತಿಯ ಶವ ಪತ್ತೆ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ವೇದಿಕೆ ನಂ 02 ರಲ್ಲಿ ಗುಂತಕಲ್ ಎಂಡ್ ಕಡೆ ಇರುವ ಫುಟ್ ಓವರ್ ಬ್ರಿಡ್ಜ್ ಮೇಲಿಂದ ಸುಮಾರು 60 ವರ್ಷದ ಅನಾಮಧೇಯ ವ್ಯಕ್ತಿ ಅಕಸ್ಮಿಕವಾಗಿ ಬಿದ್ದು, ಮೇ 31 ರಂದು ಸಾವನ್ನಪ್ಪಿರುತ್ತಾನೆ. ಮೃತನ ವಾರಸುದಾರನ ಪತ್ತೆಗಾಗಿ ಸಹಕರಿಸಬೇಕು ಎಂದು ರೈಲ್ವೇ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಚಹರೆ ಗುರುತು: ಸುಮಾರು 5.5 ಅಡಿ ಎತ್ತರ, ಸಾಧರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಸುಮಾರು ಎರಡರಿಂದ ಮೂರು ಇಂಚು ಬಿಳಿ ಕೂದಲು ಹಾಗೂ ಬಿಳಿಯ ಮೀಸೆ ಬಿಟ್ಟಿರುತ್ತಾನೆ.
ಬಲಗಾಲಿನ ಪಾದದ ಬಳಿ ಹಳೆಯ ಗಾಯದ ಗುರುತು ಇದ್ದು, ಬಲಗೈ ಅಂಗೈ ಮೇಲೆ ಪೃಥ್ವಿ ಸಿದ್ಧಲಿಂಗಮ್ಮ ಅಂತ ಹಚ್ಚೆ ಗುರುತು ಇದ್ದು, ಎಡಗೈ ಅಂಗೈ ಮೇಲೆ ಮಂಜ ರವಿ ಎಂದು ಹಚ್ಚೆ ಗುರುತು ಇರುತ್ತದೆ.
ಮೈ ಮೇಲಿನ ಬಟ್ಟೆಗಳು: ಟರ್ಕಿ ಟವಲ್, ಕರಿ ನೀಲಿ ಬಣ್ಣದ ಪ್ಯಾಂಟ್, ನೇರಳೆ ಬಣ್ಣದ ಟೀ ಶರ್ಟ್ ಧರಿಸಿಸುತ್ತಾನೆ.
ಮೃತನ ವಾರಸುದಾರರು ಪತ್ತೆಯಾದಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಮೊ.9480802131, ರಾಯಚೂರು ರೈಲ್ವೇ ಪೊಲೀಸ್ ವೃತ್ತದ ಪೊಲೀಸ್ ವೃತ್ತದ ಉಪನಿರೀಕ್ಷಕರ ಮೊ.9480800471 ಗೆ ಸಂಪಕಿಸಬಹುದಾಗಿದೆ.
----
ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜನ ಜಾಗೃತಿ ಜಾಥಾ
ತಂಬಾಕು ರಹಿತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ: ನ್ಯಾ.ರಾಜೇಶ್ ಹೊಸಮನಿ
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ತಂಬಾಕು ಸೇವನೆಯಿಂದ ಸಾರ್ವಜನಿಕರ ಆರೋಗ್ಯ ಹಾಳಾಗುವುದರ ಜೊತೆಗೆ ತಂಬಾಕು ಬೆಳೆಯು ಭೂಮಿಗೆ ಮಾರಕÀವಾಗಿ ಪರಿಣಮಿಸಿದ್ದು, ಪರಿಸರ ಮತ್ತು ಜನರ ಆರೋಗ್ಯ ಕಾಪಾಡಲು ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು, ಕೈ ಜೋಡಿಸಿ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನಿ ಅವರು ಕರೆ ನೀಡಿದರು.
“ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರೋಗ್ಯ 2023ನೇ ಸಾಲಿನ ಘೋಷಣೆಯಂತೆ “ನಮಗೆ ಆಹಾರ ಬೇಕು ತಂಬಾಕು ಅಲ್ಲ”(“We Need Food Not Tobacco”).ತಂಬಾಕು ಸೇವನೆಯಿಂದ ಪರಿಸರ ಮತ್ತು ಜನರ ಆರೋಗ್ಯ ಕಾಪಾಡಲು ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು ಈ ಅಭಿಯಾನದಲ್ಲಿ ಕೈ ಜೋಡಿಸುವುದು ಅಗತ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಗಳಾದ ಡಾ.ಹೆಚ್.ಎಲ್.ಜನಾರ್ಧನ ಅವರು ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಬಳ್ಳಾರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಾಲಾ ಆರೋಗ್ಯ ಕಾರ್ಯಕ್ರಮ, ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರ ಮೇಲೆ ತಂಬಾಕು ನಿಯಂತ್ರಣ ತನಿಖಾ ದಳದಿಂದ ಕಾರ್ಯಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಅರಿವು ಮೂಡಿಸಲು ಗುಂಪು ಕೇಂದ್ರೀಕೃತ ಚರ್ಚೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಮಥ್ರ್ಯಾಭಿವೃದ್ದಿ ತರಬೇತಿಯನ್ನು ನೀಡಿ ಜಿಲ್ಲೆಯಲ್ಲಿ ತಂಬಾಕು ಬಳಕೆ ಪ್ರಮಾಣ ನಿಯಂತ್ರಣ ಮಾಡಲು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಜಿಲ್ಲೆಯಾದ್ಯಂತ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಯಶ್ವಸಿಯಾಗಲು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮತು ತಾಲೂಕು ಮಟ್ಟದ ತಂಬಾಕು ನಿಯಂತ್ರಣ ತನಿಖಾದಳದ ಅಧಿಕಾರಿಗಳು “ಸಿಗರೇಟು ಮತ್ತು ತಂಬಾಕು ಇತರೆ ಉತ್ಪನ್ನಗಳ ಅಧಿನಿಯಮ-2003” ರ “ಸೆಕ್ಷನ್-4, 5, 6ಎ, 6ಬಿ ಮತ್ತು 7” ರ ಅಡಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯಚಾರಣೆ ನಡೆಸಿ ಈ ಕಾಯ್ದೆಯನ್ನು ಯಶ್ವಸಿಯಾಗಿ ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯ ರೂಮ್ ನಂ-43 ರಲ್ಲಿ ತಂಬಾಕು ವ್ಯಸನಿಗಳಿಗಾಗಿ ತಂಬಾಕು ವ್ಯಸನ ಮುಕ್ತ ಕೇಂದ್ರವು ಉಚಿತ ಆಪ್ತಸಮಾಲೋಚನೆ ಹಾಗೂ ಅಗತ್ಯ ಚಿಕಿತ್ಸೆ ಸೇವೆಯನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಂಡು ತಂಬಾಕು ರಹಿತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಈ ಜನ ಜಾಗೃತಿ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗಂ ವೃತ್ತ, ರಾಯಲ್ ವೃತ್ತದ ಮೂಲಕ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳಿತು.
ನಂತರ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದ್ರೋಗ ಇನ್ನೂ ಮುಂತಾದ ರೋಗಗಳ ಬಗ್ಗೆ ಸಾರ್ವಜನಿಕರಿಗೆ ಉಚಿತವಾಗಿ 57 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಅದರಲ್ಲಿ 12 ಜನರಿಗೆ Nicotine Dependency Syndrome (NDS) ಹಾಗೂ 08 ಜನರಿಗೆ Oral Submocuoses Suspected Cancer ಲಕ್ಷಣಗಳನ್ನು ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ.ರೇಣುಕಾ ಮಂಜುನಾಥ್, ಉಪಾಧ್ಯಕ್ಷರಾದ ಡಾ.ಚಂದ್ರಶೇಖರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಆರ್.ಅನಿಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಎಸ್.ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳಾದ ಎಸ್.ಭೋಜರಾಜ, ಎಸ್.ಮಲ್ಲೇಶಪ್ಪ ಸೇರಿದಂತೆ UNICEF ತಂಡದವರು ಉಪಸ್ಥಿತರಿದ್ದರು.
ಜಾಥಾದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ನರ್ಸಿಂಗ್ ವಿದ್ಯಾರ್ಥಿನಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
-------
ಕಿವುಡು ಮಕ್ಕಳ ಪಾಠ ಶಾಲೆ ದಾಖಲಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ನಗರದ ಕಂಟೋನ್‍ಮೆಂಟ್‍ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ 7 ನೇ ತರಗತಿಯವರೆಗೆ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, ಜೊತೆಗೆ ಕಂಪ್ಯೂಟರ್ ತರಬೇತಿ ಶಿಕ್ಷಣ, ನೃತ್ಯ ತರಬೇತಿ, ಕ್ರೀಡೆ ಮುಂತಾದ ಸಹಪಠ್ಯ ಚಟುವಟಿಕೆಗಳನ್ನು ನೀಡಲಾಗುತ್ತದೆ. ಈ ಮಕ್ಕಳಿಗೆ ಉಚಿತವಾಗಿ ಊಟ, ವಸತಿ, ಹಾಸಿಗೆ, ಹೊದಿಕೆ, ಪಠ್ಯ ಪುಸ್ತಕಗಳು, ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಕಿವುಡು ಮತ್ತು ಮೂಕ ಮಕ್ಕಳಿಗೆ 1 ನೇ ತರಗತಿಯಿಂದ 7 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನುರಿತ ವಿಶೇಷ ಶಿಕ್ಷಕರಿಂದ ವಿಶೇಷ ಬೋಧನೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಾಗಿರುವುದಿಲ್ಲ.
1 ನೇ ತರಗತಿಗೆ 6 ವರ್ಷದಿಂದ 10 ವರ್ಷದೊಳಗಿನ ಕಿವುಡು ಮತ್ತು ಮೂಕ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಪ್ರವೇಶ ಪತ್ರದ ಜೊತೆಗೆ ಇತ್ತೀಚಿನ ಪಾಸ್‍ಪೆÇೀರ್ಟ್ ಅಳತೆಯ 6 ಭಾವಚಿತ್ರ, ಮೈಸೂರಿನ ಮಾನಸ ಗಂಗೋತ್ರಿಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಅಥವಾ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವಿಶೇಷ ಶ್ರವಣ ತಜ್ಞರಿಂದ ಪಡೆದ ಶ್ರವಣ ದೋಷ ಪ್ರಮಾಣ ಪತ್ರ (ಡಾಕ್ಟರ್ ಸರ್ಟಿಫಿಕೆಟ್) ಹಾಗೂ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಯು.ಡಿ ಐಡಿ ಕಾರ್ಡ್, ರೇಷನ್ ಕಾರ್ಡ್, ವಾಸಸ್ಥಳ ಪ್ರಮಾಣಪತ್ರ ಸೇರಿದಂತೆ ಇತರೆ ದೃಢೀಕೃತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138 ಹಾಗೂ ಮೊ.9008485380 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಅಧೀಕ್ಷಕರಾದ ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ
ಕಾರ್ಮಿಕರು ಕಾನೂನಿನಡಿ ಸೌಲಭ್ಯ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳುವಂತೆ ನ್ಯಾ.ರಾಜೇಶ್ ಹೊಸಮನೆ ಕರೆ
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ದೇಶದ ಅಭಿವೃದ್ಧಿಗೆ ಕಾರ್ಮಿಕರು ಭದ್ರಬುನಾದಿಯಾಗಿದ್ದು, ಉದ್ದಿಮೆಗಳಿಂದ ಕಾರ್ಮಿಕರು ತಮಗಿರುವ ಎಲ್ಲಾ ಸೌಲಭ್ಯಗಳನ್ನು ಕಾನೂನಿನಾತ್ಮಕವಾಗಿ ಪಡೆದುಕೊಂಡು, ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್.ಎನ್ ಹೊಸಮನೆ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಕಾರ್ಮಿಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹೊರವಲಯದ ಹಲಕುಂದಿಯ ವಿಆರ್‍ಕೆಪಿ ಸ್ಪಾಂಜ್ ಮತ್ತು ಐರನ್ ಪ್ಲಾಂಟ್ ಕಾರ್ಖಾನೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ದಿನಾಚರಣೆ ಹಮ್ಮಿಕೊಳ್ಳುವ ಉದ್ದೇಶವು ಕಾರ್ಮಿಕರಿಗೆ ರಕ್ಷಣೆ, ಸೌಲಭ್ಯವನ್ನು ಪಡೆಯುವ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಮಿಕ ಅಧಿಕಾರಿ ಕಮಲ್‍ಷಾ ಅಲ್ತಾಪ್ ಅಹಮ್ಮದ್ ಅವರು ಪ್ರ್ರಾಸ್ತಾವಿಕವಾಗಿ ಮಾತಾನಾಡಿ, ಕಾರ್ಮಿಕರು ಹೋರಾಟ ನಡೆಸಿ ಕಾರ್ಮಿಕರ ರಕ್ಷಣೆ, ಅವರ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಾಗೂ ಕಾರ್ಮಿಕರ ಸಂಘಟನೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಮೇ 1 ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕಾರ್ಮಿಕರು ತಮ್ಮ ರಕ್ಷಣೆಗಾಗಿ ಸರ್ಕಾರವು ರೂಪಿಸಿರುವ ಕಾನೂನುಗಳ ಬಗ್ಗೆ ತಿಳಿದುಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೆ.ಎಸ್.ಪಿ.ಎಫ್ ಎನ್‍ಪೋರ್ಸ್‍ಮೆಂಟ್‍ನ ವೇಣುಗೊಪಾಲ್ ಅವರು, ಕಾರ್ಮಿಕರಿಗೆ ಭವಿಷ್ಯನಿಧಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸೋಷಿಯಲ್ ಸೆಕ್ಯೂರಿಟಿ ಆಫೀಸರ್ ಹಾಗೂ ಇ.ಎಸ್.ಐ ಬ್ರಾಂಚ್ ಮ್ಯಾನೇಜರ್ ಮನ್ನೆರಾಜಕುಮಾರ ಅವರು, ಕಾರ್ಮಿಕರ ಕುಟುಂಬದ ರಕ್ಷಣೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಎಸ್.ಐ ಇಲಾಖೆಯಿಂದ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಪಿ.ಎಫ್ ಎನ್‍ಪೋರ್ಸಮೆಂಟ್‍ನ ಅಬ್ದುಲ್ ಹಪೀಜ್, ಸಂಜಯ್, ಸಂದೀಪ್ ಸೇರಿದಂತೆ ಹೆಚ್.ಆರ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.
------
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ, ಸಿಹಿ ನೀಡಿ ಸ್ವಾಗತಿಸಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ರಾಜ್ಯಾದಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಬೇಸಿಗೆ ರಜೆ ಮುಗಿಸಿ ಮತ್ತೆ ಶಾಲೆಗೆ ಬರುತ್ತಿದ್ದಾರೆ. ಬಳ್ಳಾರಿ ನಗರದ ಹವಂಭಾವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಭಾಗವಹಿಸಿ ಪ್ರೀತಿ ಪೂರ್ವಕವಾಗಿ ಮಕ್ಕಳಿಗೆ ಶುಭಕೋರಿ ಆಹ್ವಾನಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ ಪಶ್ಚಿಮ ವಲಯ ಕುರುಗೋಡು ಇವರ ಸಂಯುಕ್ತಾಶ್ರಯದಲ್ಲಿ “ಗುಣಾತ್ಮಕ ಶೈಕ್ಷಣಿಕ ವರ್ಷ 2023-24” ರ ಅಂಗವಾಗಿ ಬುಧವಾರದಂದು ಜಿಲ್ಲಾ, ತಾಲೂಕು, ಶಾಲಾ ಮಟ್ಟದ ‘ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳು ಕನ್ನಡ ಭಾಷೆಯ ಜೊತೆಗೆ ಇಂಗ್ಲೀμï ಸಮರ್ಪಕವಾಗಿ ಓದುವ ಸಾಮಥ್ರ್ಯ ಗಳಿಸಬೇಕು. ಆಟೋಟ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿಬೇಕು. ಎಲ್ಲಾ ಮಕ್ಕಳು ಪ್ರತಿದಿನ ಶೂ ಮತ್ತು ಸಾಕ್ಸ್ ಧರಿಸಿ ಶಿಸ್ತಾಗಿ ಬರಬೇಕು ಎಂದರು.
ಇಂದು ಗೈರು ಹಾಜರಾದ ಎಲ್ಲಾ ಮಕ್ಕಳನ್ನು ಶಾಲೆಗೆ ಒಂದು ವಾರದೊಳಗಾಗಿ ಕಡ್ಡಾಯವಾಗಿ ಶಾಲೆಗೆ ಕರೆತರಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಶಾಲೆಯ ಮೂಲಭೂತ ಸೌಕರ್ಯಗಳ ಮೆಚ್ಚುಗೆ ವ್ಯಕ್ತಪಡಿಸುತ್ತಾ ಖಾಸಗಿ ಶಾಲೆಗೆ ಸರಿ ಸಮನಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಸಿಹಿ ಕೂಡ ನೀಡಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಿಂಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ಎಂ.ವಡಗೇರಿ, ಪಶ್ಚಿಮ ವಲಯ ಕುರುಗೋಡು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಸದಸ್ಯೆ ಕಲ್ಪನಾ ವೆಂಕಟರಮಣರೆಡ್ದಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.
-------
ಮಂಗಳವಾರ, ಮೇ 30, 2023
ಡಿ.ಇಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ ಕೋರ್ಸ್‍ನ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಯಟ್‍ನ ಪ್ರಾಂಶುಪಾಲರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಅಥವಾ ವೆಬ್‍ಸೈಟ್ www.schooleducation.kar.nic.in ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 23 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.schooleducation.kar.nic.in ಅಥವಾ ಸಂಸ್ಥೆಯ ಮೊ.9964891659, 9886416363, 9449380535 ಗೆ ಸಂಪರ್ಕಿಬಹುದು ಎಂದು ತಿಳಿಸಿದ್ದಾರೆ.
------
ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
*ವಿಶೇಷ ಸೂಚನೆ:* ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS ID ಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
-------
ವ್ಯಕ್ತಿ ಕಾಣೆ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ಕುಡತಿನಿ ಪೊಲೀಸ್ ಠಾಣೆಯ ವ್ಯಾಪ್ತಿಯ ಶ್ರೀರಾಮರಂಗಾಪುರ ಗ್ರಾಮದ ನಿವಾಸಿಯಾದ ಮಂಜುನಾಥ.ಆರ್ ಎನ್ನುವ 30 ವರ್ಷದ ವ್ಯಕ್ತಿಯು ಮೇ.11 ರಂದು ಕಾಣೆಯಾಗಿರುವ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಬೆಕ್ಕಿನ ಕಣ್ಣು, ದೃಢವಾದ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲು ಇದ್ದು, ಕನ್ನಡ ಮತ್ತು ತೆಲುಗು ಭಾಷೆಯನ್ನು ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ಚೆಕ್ಸ್‍ವುಳ್ಳ ತುಂಬು ತೋಳಿನ ಶರ್ಟ್, ಗೋಧಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡತಿನಿ ಪೆÇಲೀಸ್ ಠಾಣೆ ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂ.08392-258100 ಗೆ ಸಂಪರ್ಕಿಸಬಹುದಾಗಿದೆ.
-------
ಸೋಮವಾರ, ಮೇ 29, 2023
ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ನಗರದ ಹೊಸಪೇಟೆ ರಸ್ತೆಯ ಮೊದಲನೇ ರೇಲ್ವೆ ಗೇಟಿನ ಹತ್ತಿರ ಬಸ್‍ಸ್ಟಾಪ್ ಪಕ್ಕದ ಕಸದಲ್ಲಿ ಸುಮಾರು 50 ರಿಂದ 55 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥನಾಗಿ ಬಿದ್ದಿದ್ದು, ವಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಗಿರುತ್ತದೆ. ಚಿಕಿತ್ಸೆ ಫಲಿಸದೇ ಮೇ 25 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್‍ಬಜಾರ್ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಚಹರೆ ಗುರುತು: ತೆಳುವಾದ ಮೈಕಟ್ಟು, ಸಾಧಾರಣ ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಮೈಮೇಲೆ ಒಂದು ಬಿಳಿ ಬಣ್ಣದ ಟಿ-ಶರ್ಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಕೌಲ್‍ಬಜಾರ್ ಠಾಣೆಯ ಪಿ.ಐ ಮೊ.9480803047, ಪಿಎಸ್‍ಐ ಮೊ.9480803084 ಗೆ ಸಂಪರ್ಕಿಬಹುದು ಎಂದು ಸಹಾಯಕ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಮುನಿರಾಬಾದ್ ರೈಲ್ವೆ ನಿಲ್ದಾಣ ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣಗಳ ಮಧ್ಯ ರೈಲ್ವೆ ಹಳಿಯಲ್ಲಿ ಸುಮಾರು 65 ವರ್ಷದ ಅನಾಮಧೇಯ ವ್ಯಕ್ತಿಯು ಮೇ 27 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು.
ಚಹರೆ ಗುರುತು: ಎತ್ತರ ಸುಮಾರು 5.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ, ಅಗಲವಾದ ಹಣೆ, ಉದ್ದನೆಯ ಮೂಗು, ತಲೆಯಲ್ಲಿ ಸುಮಾರು ಎರಡರಿಂದ ಮೂರು ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು ಹೊಂದಿದ್ದು, ಸಣ್ಣಗೆ ಬಿಳಿ ಮೀಸೆ ಬಿಟ್ಟಿರುತ್ತಾನೆ.
ಮೃತನ ಮೈ ಮೇಲಿನ ಬಟ್ಟೆಗಳು: ಬಿಳಿಯ ಬಣ್ಣದ ತುಂಬು ತೋಳಿನ ಉದ್ದನೆ ಶರ್ಟ್, ಬಿಳಿ ಬಣ್ಣದ ಲುಂಗಿ ಹಾಗೂ ಬಿಳಿ ಬಣ್ಣದ ತುಂಬು ಬನಿಯನ್, ಬೂದು ಬಣ್ಣದ ಖಾಚಾ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೆÇಲೀಸ್ ಠಾಣೆಯ ಉಪ ನಿರೀಕ್ಷಕರ ಮೊ.9480802131, ರಾಯಚೂರು ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471 ಗೆ ಸಂಪರ್ಕಿಸಬಹುದು ಎಂದು ರೈಲ್ವೇ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಯುವತಿ ಕಾಣೆ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಸಿರುಗುಪ್ಪ ಪಟ್ಟಣದ 8ನೇ ವಾರ್ಡ್‍ನ ಭೋವಿ ಕಾಲೋನಿ ನಿವಾಸಿಯಾದ ಬಿ.ಕೀರ್ತಿ ಎನ್ನುವ 19 ವರ್ಷದ ಯುವತಿ ಮೇ.25 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಕಾಣೆಯಾದ ಯುವತಿ ಚಹರೆ ಗುರುತು: ಸುಮಾರು 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣೆಕೆಂಪು ಮೈಬಣ್ಣ, ದುಂಡು ಮುಖ ಹೊಂದಿತ್ತಾಳೆ. ಕನ್ನಡ ಭಾಷೆಯನ್ನು ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಮತ್ತು ಬಿಳಿ ಮಿಶ್ರಿತ ಲಾಂಗ್ ಪ್ರಾಕ್, ಕಪ್ಪು ಬಣ್ಣದ ಲಗ್ಗಿನ್ ಧರಿಸಿರುತ್ತಾಳೆ.
ಈ ಮೇಲ್ಕಂಡ ಚಹರೆಯುಳ್ಳ ಯುವತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೆÇಲೀಸ್ ಠಾಣೆಯ ದೂ.08396-220333, ಸಿ.ಪಿ.ಐ ವೃತ್ತ ಸಿರುಗುಪ್ಪ ದೂ.08396-220003, ಡಿ.ಎಸ್.ಪಿ ಸಿರುಗುಪ್ಪ ದೂ.08392-276000, ಎಸ್.ಪಿ ಬಳ್ಳಾರಿ ಅವರ ದೂ.08932-258400 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
-------
ಸಿರುಗುಪ್ಪ: ಸರ್ಕಾರಿ ಐ.ಟಿ.ಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಸಿರುಗುಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ವಿವಿಧ ವೃತ್ತಿಗಳಾದ ವಿದ್ಯುತ್ ಕರ್ಮಿ, ಜೋಡಣೆಗಾರ ಪ್ರವೇಶಕ್ಕಾಗಿ ಮೆರಿಟ್-ಕಮ್-ಲಿಸರ್ವೇಶನ್ ಆಧಾರದ ಮೇಲೆ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ವಿ.ಶೇಷಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಸಿರುಗುಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಹೈ.ಕ (371ಜೆ) ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಹಾಗೂ ಗ್ರಾಮೀಣ ಪ್ರಮಾಣ ಪತ್ರ, ಇನ್ನೀತರ ದಾಖಲಾತಿಗಳು.
ಹೆಚ್ಚಿನ ಮಾಹಿತಿಗಾಗಿ ಮೊ.9448441568, 9902781032 ಹಾಗೂ 9980862730 ಗೆ ಸಂಪರ್ಕಿಸಬಹುದು.
------
ಸಿರುಗುಪ್ಪ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಜೂ.03 ರಂದು
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 33/11 ಕೆ.ವಿ ರುದ್ರಪಾದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗದ ನಿರ್ವಹಣೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಜೂನ್ 03 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ರುದ್ರಪಾದ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವ ಪ್ರದೇಶಗಳು:*
ಮಣ್ಣೂರು, ಸೂಗೂರು, ಮುದ್ದಟ್ಟನೂರು, ರುದ್ರಪಾದ, ನಡವಿ, ದೊಡ್ಡರಾಜ ಕ್ಯಾಂಪ್, ಮಡೆ ಕ್ಯಾಂಪ್, ಕವಳೆ ಬಸವೇಶ್ವರ ಕ್ಯಾಂಪ್, ಹಾವಿನಹಾಳ್, ಮಾಳಾಪುರ, ಚೆನ್ನಪಟ್ಟಣ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
-----
ಕುಡತಿನಿ: ಸರ್ಕಾರಿ ಐ.ಟಿ.ಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣದಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಗೆ 2023-24 ಗೆ ಸಾಲಿಗೆ ವಿವಿಧ ವೃತ್ತಿಗಳಿಗೆ ಮೆರಿಟ್-ಕಮ್-ಲಿಸರ್ವೇಶನ್ ಆಧಾರದ ಮೇಲೆ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವಿ.ಶೇಷಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಲಭ್ಯವಿರುವ ಇ.ಎಂ, ಜೋಡಣೆಗಾರ, ವಿದ್ಯುತ್‍ಕರ್ಮಿ, ಚರಕಿಗಾರ ವೃತ್ತಿಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬೇಕಾಗಿರುವ ದಾಖಲೆಗಳು: ಆಧಾರ್ ಕಾರ್ಡ್, ಹೈ.ಕ (371ಜೆ) ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮತ್ತು ಗ್ರಾಮೀಣ ಪ್ರಮಾಣ ಪತ್ರ ಹಾಗೂ ಇನ್ನಿತರ ದಾಖಲಾತಿಗಳು.
ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.9448441568, 9449666314 ಗೆ ಸಂಪರ್ಕಿಸಬಹುದಾಗಿದೆ.
-------
ಸರ್ಕಾರಿ ಐಟಿಐನಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಪ್ರಸಕ್ತ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಮೆರಿಟ್-ಕಮ್-ರಿಸರ್ವೇಶನ್ ಆಧಾರÀದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ ಬರುವ ಸಂಸ್ಥೆಗಳಲ್ಲಿ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ಗವಿಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್, ಹೈಕ(371ಜೆ) ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಮತ್ತು ಟಿಸಿ,ಜಾತಿ ಮತ್ತು ಆದಾಯ ಪ್ರಮಾಣಪತ್ರ,ಕನ್ನಡ ಮತ್ತು ಗ್ರಾಮೀಣ ಪ್ರಮಾಣಪತ್ರಗಳು ಹಾಗೂ ಇನ್ನೀತರ ದಾಖಲೆಗಳೊಂದಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಬಳ್ಲಾರಿಯ ಕಂಟೋನ್ಮೆಂಟ್ ಪ್ರದೇಶದ ರೇಡಿಯೋ ಪಾರ್ಕ್ ಹತ್ತಿರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ.10 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಟಾಟಾ ಉದ್ಯೋಗ ಯೋಜನೆಯಡಿ ಅನುμÁ್ಠನಗೊಳಿಸಿರುವ 03 ಮಟ್ಟು 10 ಧೀರ್ಘಾವಧಿಯ ವೃತ್ತಿಗಳಿಗೆ ಆನ್‍ಲೈನ್‍ನಲ್ಲ್ಲಿ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಳ್ಳಾರಿ ಹಾಗೂ ಹತ್ತಿರದ ಸರ್ಕಾರಿ ಐಟಿಐಗೆ ಭೇಟಿ ನೀಡಿ ವಿಚಾರಿಸಬಹುದು ಅಥವಾ ದೂ:08392-240472, ಮೊ.9945947375, 9480939802 ಗೆ ಸಂಪರ್ಕಿಸಬಹುದು.
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ):
ಕುರುಗೋಡು ತಾಲೂಕು ವ್ಯಾಪ್ತಿಯ ಸೋಮಸಮುದ್ರ ಗ್ರಾಮದಲ್ಲಿನ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಗೆ 2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಕನ್ನಡ, ಇಂಗ್ಲೀಷ್, ಹಿಂದಿ, ಕಲಾ, ವಿಜ್ಞಾನ (ಸಿಬಿಝೆಡ್) ಹಾಗೂ ಕಲಾ ವಿಭಾಗ ಸೇರಿದಂತೆ ಸೇರಿದಂತೆ ಐದು ವಿಷಯಗಳಿಗೆ 5 ಹುದ್ದೆಗಳಿದ್ದು, ಅಭ್ಯರ್ಥಿಗಳ ಪದವಿ ಮತ್ತು ಬಿ.ಎಡ್ ವಿದ್ಯಾರ್ಹತೆ ಮೇಲೆ ಆಯ್ಕೆ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ದೃಢೀಕೃತ ಅಂಕಪಟ್ಟಿಗಳೊಂದಿಗೆ ಅರ್ಜಿಗಳನ್ನು ಮುಖ್ಯೋಪಾಧ್ಯಾಯರು ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆ. ಸೋಮಸಮುದ್ರ, ಇವರಿಗೆ ಮುದ್ದಾಂ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸೋಮಸಮುದ್ರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದಾಗಿದೆ.
--------
ಶುಕ್ರವಾರ, ಮೇ 26, 2023
ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ವೇದಿಕೆ ನಂ.1 ಕ್ಕೆ ಅಂಟಿಕೊಂಡಿರುವ ವಿಚಾರಣೆಯ ಕೊಠಡಿಯ ಮುಂದೆ ಸುಮಾರು 45 ವರ್ಷದ ಅನಾಮಧೇಯ ವ್ಯಕ್ತಿಯು ಮೇ 26 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು.
ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ತೆಳುವಾದ ಮೈಕಟ್ಟು, ಸಾಧಾರಣ ಕಪ್ಪು ಮೈಬಣ್ಣ, ಕೋಲು ಮುಖ, ಅಗಲವಾದ ಹಣೆ, ನೆಟ್ಟನೆಯ ಮೂಗು ಹೊಂದಿದ್ದು, ತಲೆಯಲ್ಲಿ ಸುಮಾರು ಮೂರು ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮತ್ತು ಕಪ್ಪು ಮಿಶ್ರಿತ ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ.
ಮೃತನ ಮೈ ಮೇಲಿನ ಬಟ್ಟೆಗಳು: ಬಿಳಿಯ ಬಣ್ಣದ ಆಫ್ ಟಿ-ಶರ್ಟ್, ಪಾಚಿ ಹಸಿರು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೆÇಲೀಸ್ ಠಾಣೆಯ ಉಪ ನಿರೀಕ್ಷಕರ ಮೊ.9480802131, ರಾಯಚೂರು ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471 ಗೆ ಸಂಪರ್ಕಿಸಬಹುದು ಎಂದು ರೈಲ್ವೇ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಿಸಿ ಪವನ್ ಕುಮಾರ್ ಮಾಲಪಾಟಿ ಅಧಿಕಾರ ಸ್ವೀಕಾರ
ಬಳ್ಳಾರಿ, ಮೇ 26(ಕರ್ನಾಟಕ ವಾರ್ತೆ):
ಸರ್ಕಾರದ ಅಧಿಸೂಚನೆಯನ್ವಯ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟ ಹಾಗೂ ವೈಯಕ್ತಿಕ ಗಮನಕ್ಕೆ ತರಬೇಕಾದಂತಹ ಸರ್ಕಾರಿ ಮತ್ತು ಅರೆಸರ್ಕಾರಿ ಪತ್ರಗಳು, ಪ್ರಮುಖ ದಾಖಲೆಗಳು ಮತ್ತು ಗೌಪ್ಯ ಪತ್ರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗಿ ಕೋರಲಾಗಿದೆ.
ವಿಳಾಸ: ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ, ಹೆಚ್.ಆರ್.ಜಿ ವೃತ್ತ ಹತ್ತಿರ, ಪಿನ್ ಕೋಡ್ 583101 ಮತ್ತು ದೂರವಾಣಿ ಸಂಖ್ಯೆ-08392273731, 08392276192 ಹಾಗೂ E-Mail: combudably@gmail.com, Web Site: www.bellary.uda.gov.in ಈ ವಿಳಾಸಕ್ಕೆ ಕಳುಹಿಸಿಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಪವನ್‍ಕುಮಾರ್ ಮಾಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅನಧೀಕೃತ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಪ್ರವೇಶಾತಿ ಹೊಂದಬೇಡಿ
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ಬಳ್ಳಾರಿ ಪಶ್ಚಿಮ ವಲಯ ವ್ಯಾಪ್ತಿಗೆ ಬರುವ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ ಅಥವಾ ಅಡ್ಮಿಷನ್ ಕೊಡಿಸಬಾರದು. ಈ ಶಾಲೆಗಳಿಗೆ ಇಲಾಖೆ ಅನುಮತಿ ನೀಡಿರುವುದಿಲ್ಲ. ಇವು ಅನಧೀಕೃತ ಶಾಲೆಗಳಾಗಿರುತ್ತವೆ.
*ಶಾಲೆಗಳ ವಿವರ:* ನಗರದ 02 ನೇ ರೈಲ್ವೆ ಗೇಟ್ ಹತ್ತಿರದ ನಾಗಲಕೆರೆಯ ಈಜುಕೊಳ(ದೊಡ್ಡಬಾವಿ) Veda TSC-Prep ಪೂರ್ವ ಪ್ರಾಥಮಿಕ ಶಾಲೆ, ಪಾರ್ವತಿ ನಗರದ 03 ನೇ ಕ್ರಾಸ್‌ನ ಸತ್ಯಂ ಟೈನಿ ಟಾಯ್ಸ್ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪಾರ್ವತಿ ನಗರದ 02 ನೇ ಕ್ರಾಸ್‌ನ ಲಿಟಲ್ ಪೀಟ್ಸ್ ಪೂರ್ವ ಪ್ರಾಥಮಿಕ ಶಾಲೆ.
ಈ ಮೇಲಿನ ಅನಧಿಕೃತ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಮಕ್ಕಳನ್ನು ಪ್ರವೇಶಾತಿ/ಅಡ್ಮಿಷನ್ ಮಾಡಿಸಿದಲ್ಲಿ ಸಂಬAಧಿಸಿದ ಪಾಲಕರು ಅಥವಾ ಪೋಷಕರೇ ಜವಾಬ್ದಾರರಾಗಿರುತ್ತಾರೆ ಎಂದು ಪಶ್ಚಿಮ ವಲಯ ಕುರುಗೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ.
-------
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಮೇ 31 ರಂದು
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಅಂಗವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಹಾಗೂ ತಂಬಾಕು ಉತ್ಪನ್ನಗಳ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮೇ 31 ರಂದು ಬೆಳಗ್ಗೆ 09 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಚಾಲನೆ ನೀಡುವರು.
ಜನಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಂಬಾಕು ಉತ್ಪನ್ನಗಳ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಎನ್‍ಟಿಸಿಪಿ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಮಳೆಯಿಂದಾಗುವ ಹಾನಿ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ
ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ):
ಮುಂಗಾರು ಮಳೆ ಆರಂಭವಾಗಿರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ಸಂಭವನೀಯ ಅತಿವೃಷ್ಟಿ, ಪ್ರವಾಹ, ಬೆಳೆ ಹಾನಿಯನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಂಭವನೀಯ ಅತಿವೃಷ್ಟಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅತಿ ಮಳೆಯಿಂದಾಗಿ ಹಾನಿ ಅಥವಾ ಪ್ರವಾಹ ಉಂಟಾದರೆ, ಹಾನಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡು ಸಮರ್ಥವಾಗಿ ನಿರ್ವಹಿಸಬೇಕು ಎಂದರು.
ನಗರದಲ್ಲಿನ ಎಸ್.ಎನ್ ಪೇಟೆಯ ಕೆಳಸೇತುವೆಯಲ್ಲಿ ಮಳೆ ನೀರು ಸಂಗ್ರಹವಾಗಬಹುದಾಗಿದ್ದು, ಹೆಚ್ಚುವರಿ ನೀರು ಹೊರ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು. ನಗರ ಪ್ರದೇಶದಲ್ಲಿ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ, ದುರಸ್ತಿ ಕಾರ್ಯ ಮಾಡಬೇಕು. ನೀರು ಸಂಗ್ರಹವಾಗಿ ನಿಲ್ಲದಂತೆ ರಾಜಕಾಲುವೆಗಳಿಗೆ ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು ಎಂದು ತಿಳಿಸಿದರು.
ಲೋಕೋಪಯೋಗಿ, ಪಂಚಾಯತ್ ರಾಜ್ ಮತ್ತು ಗ್ರಾಮಪಂಚಾಯತ ರಸ್ತೆಗಳನ್ನು ಪರಿಶೀಲನೆ ಮಾಡಿ ಅಗತ್ಯವಿದ್ದರೆ ತುರ್ತುಕಾಮಗಾರಿಗೆ ಕ್ರಮವಹಿಸಬೇಕು. ಸೇತುವೆಗಳ ಸುಸ್ಥಿತಿ ಪರಿಶೀಲಿಸಿ, ದುರಸ್ತಿ ಕಾಮಗಾರಿಗಳಿದ್ದಲ್ಲಿ ತ್ವರಿತಗತಿಯಲ್ಲಿ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆ ಅತಿಯಾಗಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಜನರಿಗೆ ತೊಂದರೆ ಆಗುವ ಸಾಧ್ಯತೆಗಳಿರುತ್ತವೆ, ಈ ಕುರಿತು ಪಾಲಿಕೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರತಿ ವಾರ್ಡ್‍ವಾರು ಸ್ಥಳ ಗುರುತಿಸಿ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
*ಜಿಲ್ಲಾಡಳಿತದಿಂದ ಪರಿಹಾರ ವಿತರಣೆ:* ಜಿಲ್ಲೆಯಲ್ಲಿ ಸುರಿದ ಮಳೆಗೆ ಕಳೆದ ವಾರದಲ್ಲಿ ಮನೆ ಕುಸಿತಕ್ಕೆ ಒಬ್ಬರು, ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ಸಿಡಿಲು ಬಡಿದು ಬಳ್ಳಾರಿ ತಾಲೂಕು 1, ಸಿರುಗುಪ್ಪ 1, ಸಂಡೂರು 1 ಮತ್ತು ಸಿರುಗುಪ್ಪ ತಾಲೂಕಿನ ಮನೆಕುಸಿತಕ್ಕೆ ಒಬ್ಬರು ಸೇರಿ ಒಟ್ಟು ನಾಲ್ವರು ಮೃತ ಪಟ್ಟಿದ್ದಾರೆ. ಈಗಾಗಲೇ ನಾಲ್ವರಿಗೂ ನಿಯಮಾನುಸಾರ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅತಿವೃಷ್ಟಿಯಾದಲ್ಲಿ, ಉಂಟಾಗಬಹುದಾದ ರಸ್ತೆ, ಸೇತುವೆಗಳ ಹಾನಿ ಬಗ್ಗೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಅಂತರ್‍ರಾಜ್ಯ ಗಡಿ ವ್ಯಾಪ್ತಿಯಲ್ಲಿ ಬರುವ ಹಗರಿ (ವೇದಾವತಿ), ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆ ಹಾಗೂ ಕಂಪ್ಲಿ ಸೇತುವೆಗಳ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗಾಳಿ-ಮಳೆಯಿಂದ ವಿದ್ಯುತ್ ಕಂಬಗಳು ಹಾನಿಗೀಡಾದಲ್ಲಿ, ವಿದ್ಯುತ್ ಸಂಪರ್ಕ ತ್ವರಿತವಾಗಿ ಪುನರ್ ಸ್ಥಾಪಿಸುವ ಕೆಲಸವನ್ನು ಜೆಸ್ಕಾಂ ಅಧಿಕಾರಿಗಳು ಮಾಡಬೇಕು ಎಂದರು.
*ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ನೀಡಿ:* ಮಾನ್ಸೂನ್ ಪ್ರಾರಂಭವಾಗುವುದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸಾಂಕ್ರಾಮಿಕ ರೋಗಗಳ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಕುರಿತು ಮಲೇರಿಯಾ, ಚಿಕುನ್ ಗುನ್ಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಸರ್ಕಾರಿ ಹಾಗೂ ಇತರೆ ಕಟ್ಟಡಗಳ ಮೇಲೆ ಸ್ವಚ್ಛಗೊಳಿಸಬೇಕು ಹಾಗೂ ನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದರು.
*ಪ್ರವಾಹವನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧ:* ವಿಪತ್ತು ನಿರ್ವಹಣೆಗೆ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲ ಕಲ್ಪಿಸುವ ಹಾಗೂ ಸಹಕಾರಿಯಾಗುವ ನಿಟ್ಟಿನಲ್ಲಿ ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತವು ಈಗಾಗಲೇ 3 ಬೋಟ್ ಸೇರಿದಂತೆ ಅಗತ್ಯ ಸಲಕರಣೆ (ಲೈಫ್ ಜಾಕೇಟ್) ಗಳನ್ನು ಖರೀದಿಸಿದೆ. ರಕ್ಷಣಾ ಸಾಮಗ್ರಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿಪತ್ತು ನಿರ್ವಹಣೆ ಮಾಡುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಸಂಪರ್ಕಿಸಬೇಕಾದ ಅಧಿಕಾರಿಗಳ ವಿವರ:* ಮುಂದಿನ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ಜನ ಜನವಾರುಗಳಿಗೆ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಕ್ಷೇತ್ರವಾರು ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಿದೆ.
ಬಳ್ಳಾರಿ ಅಗ್ನಿಶಾಮಕ ದಳ ಕಚೇರಿಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ತಿಮ್ಮಾರೆಡ್ಡಿ-9480823685, ಜಿಲ್ಲಾ ಗೃಹ ರಕ್ಷಕ ಕಚೇರಿಯ ಅಗ್ನಿಶಾಮಕ ಆಧಿಕಾರಿಗಳು ಹಾಗೂ ಸಮಾದೇಷ್ಟರಾದ ಶಕೀಬ್.ಎಂ-9483641234. ಸಿರುಗುಪ್ಪ ಅಗ್ನಿಶಾಮಕ ದಳ ಕಚೇರಿಯ ಅಗ್ನಿಶಾಮಕ ಅಧಿಕಾರಿಗಳು, ಕುರುಗೋಡಿನ ಅಗ್ನಿಶಾಮಕ ದಳ ಕಚೇರಿಯ ಅಗ್ನಿಶಾಮಕ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ನೀರಾವರಿ, ಲೋಕೋಪಯೋಗಿ, ಆರ್‍ಡಿಪಿಆರ್, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ ಮಾತನಾಡಿದರು.
------
ಗುರುವಾರ, ಮೇ 25, 2023
ಸರ್ಕಾರಿ ಪಾಲಿಟೆಕ್ನಿಕ್; ಡಿಪ್ಲೋಮಾ ಕೋರ್ಸ್‍ಗಳಿಗೆ ಖಾಲಿ ಉಳಿದ ಸೀಟ್‍ಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ):
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ 2023-24 ನೇ ಸಾಲಿನ ಪ್ರಥಮ ಡಿಪ್ಲೋಮಾ ಕೋರ್ಸ್‍ಗಳಿಗೆ ಈಗಾಗಲೇ ಆನ್‍ಲೈನ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಖಾಲಿ ಉಳಿದ ಸೀಟ್‍ಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 29 ರಿಂದ ಜೂ.02 ರ ಮಧ್ಯಾಹ್ನ 03 ರವರೆಗೆ ನಡೆಯಲಿದೆ. ಅದೇ ದಿನ ಸಂಜೆ 04 ರಂದು ಸಂಸ್ಥೆಯಲ್ಲಿ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಜೂ.03 ರಂದು ಬೆಳಗ್ಗೆ 09 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಎಂದು ಸರ್ಕಾರಿ ಪಾಲಿಟೆಕ್ನಿಕ್‍ನÀ ಪ್ರಾಚಾರ್ಯೆ ಡಿ.ಟಿ.ದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಯುವರಾಜ ದಿಬ್ಬದಳ್ಳಿ ಅವರಿಗೆ ಪಿಎಚ್‍ಡಿ ಪದವಿ
ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯವು ಯುವರಾಜ ದಿಬ್ಬದಳ್ಳಿ ಅವರಿಗೆ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಘೋಷಿಸಿದೆ.
ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಮ್.ಕೆ.ಅಂಶೂಮಾಲಿ ಅವರ ಮಾರ್ಗದರ್ಶನದಲ್ಲಿ ರಸಾಯನಶಾಸ್ತ್ರ ವಿಭಾಗದಲ್ಲಿ “ಹೆಟೆರೊ-ಬೈನ್ಯೂಕ್ಲಿಯರ್ ಮೆಟಾಲೋಸೀನ್ಸ್ ಡಿರೈವ್ಡ್ ಫ್ರಮ್ ಗ್ರೂಪ್ Iಗಿ ಟ್ರಾನ್ಸಿಷನ್ ಮೆಟಲ್ ಕ್ಯಾಟಲಿಸ್ಟ್ ವಿತ್ ಸ್ಟಬಿಲೈಸ್ಡ್ ಕ್ಯಾಟಯಾನಿಕ್ ಸೆಂಟರ್” (Hetero-Binuclear Metallocenes Derived From Group Iv Transition Metal Catalyst With Stabilized Cationic Center) ಎಂಬ ಮಹಾಪ್ರಬಂಧ ಮಂಡನೆಗೆ ವಿಶ್ವವಿದ್ಯಾಲಯವು “ಡಾಕ್ಟರ್ ಆಫ್ ಫಿಲಾಸಫಿ” ಪದವಿಯನ್ನು ಘೋಷಣೆ ಮಾಡಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿ.ವಿ ಯು ಪ್ರಕಟಣೆಯಲ್ಲಿ ತಿಳಿಸಿದೆ.
------
ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿನ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ ರಾಷ್ಟ್ರೀಯ ಕೈಮಗ್ಗ ದಿನಾಚರಣೆ (7ನೇ ಆಗಸ್ಟ್) ಸಂದರ್ಭದಲ್ಲಿ ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕøಷ್ಠತೆ ಹೊಂದಿರುವ ಉತ್ಪನ್ನಗಳ ಉತ್ಪಾದನೆಯಲ್ಲಿ ತೊಡಗಿರುವ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್, ರೂ ನಂ.’ಎಫ್-22’ ಒಂದನೇ ಮಹಡಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಮೇ 31 ರೊಳಗಾಗಿ ಸಲ್ಲಿಸಬೇಕು.
ಸದರಿ ಪ್ರಶಸ್ತಿಯು ನಗದು ಬಹುಮಾನ, ಒಂದು ನೆನಪಿನ ಕಾಣಿಕೆ, ಒಂದು ಶಾಲು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
*ನಗದು ಬಹುಮಾನದ ವರ್ಗಗಳು:* ರೇμÉ್ಮ ವಲಯದಲ್ಲಿ ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ ಬಹುಮಾನ 20 ಸಾವಿರ ರೂ., ಹತ್ತಿ ವಲಯದಲ್ಲಿ ಪ್ರಥಮ ಬಹುಮಾನವಾಗಿ 20 ಸಾವಿರ ರೂ., ದ್ವಿತೀಯ ಬಹುಮಾನವಾಗಿ 15 ಸಾವಿರ ರೂ. ಹಾಗೂ ಉಣ್ಣೆ ವಲಯದಲ್ಲಿ ಪ್ರಥಮವಾಗಿ 15 ಸಾವಿರ ರೂ. ಬಹುಮಾನ ನೀಡಲಾಗುವುದು.
*ಅರ್ಹತೆಗಳು:* ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೈಮಗ್ಗ ನೇಕಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೈಮಗ್ಗ ನೇಕಾರರ ವಯಸ್ಸು ಕನಿಷ್ಠ 30 ವರ್ಷ ಪೂರೈಸಿರಬೇಕು, ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು 10 ವರ್ಷಗಳ ಅನುಭವ ಇರತಕ್ಕದ್ದು, ಪ್ರಶಸ್ತಿಗಾಗಿ ಸಲ್ಲಿಸುವ ಉತ್ಪನ್ನದ ಮಾದರಿ (Sample) ಸ್ವತಃ ಅರ್ಜಿದಾರರೇ ತಯಾರಿಸಿದ ಉತ್ಪನ್ನವೇ ಆಗಿರತಕ್ಕದ್ದು, ಅರ್ಜಿದಾರರು ಪ್ರಶಸ್ತಿಗೆ ನಿಗದಿಪಡಿಸಿರುವ ಅರ್ಹತೆ ಮಾನದಂಡವನ್ನು ಪೂರೈಸತಕ್ಕದ್ದು ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ಮೊ.9902772936, 9844837264 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
--------
ವಿಶ್ವ ಸ್ಕಿಜೋಫ್ರೇನಿಯ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ ಕಾರ್ಯಕ್ರಮ
ಆರಂಭದಲ್ಲಿಯೇ ಗುರುತಿಸಿ ರೋಗಿಯ ಮನಸ್ಥಿತಿ ಅನುಸಾರ ಚಿಕಿತ್ಸೆ ನೀಡಿದರೆ ಕಾಯಿಲೆ ಗುಣಮುಖ: ನ್ಯಾ.ರಾಜೇಶ್ ಹೊಸಮನೆ
ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ):
ವ್ಯಕ್ತಿಯಲ್ಲಿ ಪದೇ ಪದೇ ಬರುವ ತೀವ್ರತರ ಸಂಕಷ್ಟಗಳಿಗೆ ಅವನು ಸಿಲುಕಿದಾಗ ಮಾನಸಿಕ ಕಾಯಿಲೆಗಳಲ್ಲಿಯೇ ತೀವ್ರ ಸ್ವರೂಪವಾದ ಸ್ಕಿಜೋಪ್ರೇನಿಯ ಖಾಯಿಲೆಯು ಬರುವ ಸಾಧ್ಯತೆಯಿದ್ದು, ಆರಂಭದಲ್ಲಿಯೇ ರೋಗಿಯ ಮನಃಸ್ಥಿತಿಗೆ ಅನುಸಾರವಾಗಿ ಕುಟುಂಬದ ಸದಸ್ಯರ ನೆರವಿನಿಂದ ಚಿಕಿತ್ಸೆ ನೀಡಿದರೆ ಖಾಯಿಲೆ ಬೇಗ ವಾಸಿಯಾಗಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ವಿಶ್ವ ಸ್ಕಿಜೋಪ್ರೇನಿಯ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಸ್ಕಿಜೋಫ್ರೇನಿಯ ರೋಗಿಗಳನ್ನು ಮನೆಯಲ್ಲಿಯೇ ಇಟ್ಟುಕೊಳ್ಳುವುದು ಅಪಾಯ ಎಂಬ ನಂಬಿಕೆ ಇತ್ತು. ಆದರೆ ಕಳೆದ 30 ವರ್ಷಗಳಿಂದ ಈಚೆಗೆ ವೈದ್ಯಕೀಯ ಕ್ಷೇತ್ರದಲ್ಲಾದ ಸಂಶೋದನೆ ಹಾಗೂ ಬದಲಾದ ಚಿಕಿತ್ಸೆ ವಿಧಾನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಮಾತನಾಡಿ, ಸಾಮಾನ್ಯವಾಗಿ 15 ರಿಂದ 25 ವರ್ಷ ವಯಸ್ಸಿನ ಅವಧಿಯ ತರುಣರಲ್ಲ್ಲಿ ಗ್ರಾಮೀಣ-ಪಟ್ಟಣ, ಬಡತನ-ಶ್ರೀಮಂತಿಕೆ ಎಂಬ ಬೇಧಬಾವವಿಲ್ಲದೇ ಎಲ್ಲಿರಿಗೂ ಬರಬಹುದಾದ ಈ ಖಾಯಿಲೆಯು ವ್ಯಕ್ತಿಯ ಮನಸ್ಸಿನ ಕ್ರಿಯೆಗಳಲ್ಲಿ ಆಲೋಚನೆ, ಭಾವನೆಗಳನ್ನು ಹಾಗೂ ಪಂಚೇಂದ್ರಿಯಗಳ ಮೂಲಕ ತನ್ನ ಸುತ್ತಲಿನ ಪರಿಸರವನ್ನು ಅರ್ಥಮಾಡಿಕೊಳ್ಳಲಾಗದ ಪರಿಸ್ಥಿತಿಗೆ ಹೋಗುತ್ತಾನೆ.
ಮಾತ್ರೆ ಮತ್ತು ಚುಚ್ಚು ಮದ್ದು ರೂಪದಲ್ಲಿ ಔಷದಿ ಲಭ್ಯವಿದ್ದು, ಖಾಯಿಲೆ ಕಾಣಿಸಿಕೊಂಡ ಕೆಲವೇ ವಾರದೊಳಗೆ ಔಷದೋಪಚಾರ ಪ್ರಾರಂಭಿಸಿದರೆ ಬೇಗ ಹತೋಟಿಗೆ ಬರುತ್ತದೆ ಎಂದು ತಿಳಿಸಿದರು.
ಈಗಾಗಲೇ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದಿಂದ ಮನೋಚೈತನ್ಯ ಕಾಯ್ದೆ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರ ತಪಾಸಣೆ ಏರ್ಪಡಿಸಿ, ರೋಗಿಗಳಿಗೆ ಆತ್ಮಹತ್ಯೆ ಸ್ಥೈರ್ಯ ತುಂಬುವುದರ ಜೊತೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.
ಈಗಾಗಲೇ ಕಳೆದ ವರ್ಷ 3,180 ರೋಗಿಗಳ ತಪಾಸಣೆ ಮಾಡಲಾಗಿದ್ದು, 388 ಬುದ್ದಿಮಾಂದ್ಯರಿಗೆ ಹಾಗೂ 150 ಮಾನಸಿಕ ಅಸ್ವಸ್ಥರಿಗೆ ವಿಶೇಷ ಗುರುತಿನ ಚೀಟಿ(ಯುಡಿಐಡಿ) ಒದಗಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಒದಗಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ ಬಿ.ಚವ್ಹಾನ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಪೂರ್ಣಿಮ.ಎಸ್.ಕಟ್ಟಿಮನಿ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಆರ್.ಅನೀಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಇಂದ್ರಾಣಿ, ಮಾನಸಿಕ ತಜ್ಞೆ ಡಾ.ಭುವನೇಶ್ವರಿ ದೇವಿ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಈಶ್ವರ್ ದಾಸಪ್ಪನವರ್, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಾಂತಮ್ಮ ಹಾಗೂ ಶಾಂತಕುಮಾರ್, ಕಾವ್ಯ.ಕೆ.ಪಿ, ರಂಜಿತ.ಜಿ, ಅಬ್ದುಲ್ಲಾ.ಡಿ, ನಿರಂಜನ, ರಮೇಶ ಬಾಬು, ಮಹೇಶ್, ಗುಲಾಮ್, ನಭಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಾಥಾದಲ್ಲಿ ವಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಶಿಕ್ಷಣಾಥಿಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ನೀಡಿದರು.
-----
ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ*
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ ಬೆಂಗಳೂರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಎಸ್‍ಎಫ್‍ಟಿ ಅಡಿ ಉಚಿತ ಆರೋಗ್ಯ ತಪಾಸಣೆ, ಕ್ಷಯ ರೋಗದ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ತಪಾಸಣಾ ಶಿಬಿರ ಹಾಗೂ ಕ್ಷಯರೋಗ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಮಾತನಾಡಿದರು.
ಪ್ರಸ್ತುತ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 22 ಜನ ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಜನತೆ ಆತಂಕ ಪಡಬೇಕಾಗಿಲ್ಲ ಇದಕ್ಕೆ ಬೇಕಾದ ಚಿಕಿತ್ಸೆಯನ್ನು ಉಚಿತವಾಗಿ ನೇರ ನಿಗಾವಣೆ ಮೂಲಕ ಒದಗಿಸುವ ಮೂಲಕ ಒದಗಿಸಿ ಗುಣಪಡಿಸಲಾಗುತ್ತಿದೆ, ರೋಗಿಯು ಸಾರ್ವಜನಿಕರ ಸ್ಥಳದಲ್ಲಿ, ಮನೆಯಲ್ಲಿ ಅಥವಾ ಇತರರ ಬಳಿ ಮಾತನಾಡುವ ವೇಳೆ ಕೆಮ್ಮು, ಅಥವಾ ಶೀನು ಬಂದಲ್ಲಿ ಶುದ್ಧವಾದ ಬಟ್ಟೆಯನ್ನು ಬಾಯಿಗೆ ಅಡ್ಡಲಾಗಿ ಬಳಸಿ ಎಂದು ಸಲಹೆ ನೀಡಿ, ಪ್ರಶಿಕ್ಷಣಾರ್ಥಿ ಖುರ್ಶಿದ್ ಬೇಗಂ ಸಿರಿಗೇರಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಇಲ್ಲಿನ ಜನರ ಬಳಿ ತೆರಳಿ ಕ್ಷಯರೋಗದ ಮಾಹಿತಿಯೊಂದಿಗೆ ಅರಿವು ಮೂಡಿಸುವಂತಹ ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಎಸ್.ಎಫ್.ಟಿ ಮಾರ್ಗದರ್ಶಕರಾದ ಈಶ್ವರ ದಾಸಪ್ಪನವರ ಅವರು ಮಾತನಾಡಿ, ಆರೋಗ್ಯ ಶಿಕ್ಷಣವನ್ನು ವಿವಿಧ ಬಗೆಗಳಲ್ಲಿ ಸಾರ್ವಜನಿಕರಿಗೆ ಮನಮುಟ್ಟುವಂತೆ ನೀಡುವ ಕಾರ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ಕ್ಷಯ ರೋಗ ನಿರ್ಮೂಲನೆ ಕಾರ್ಯಕ್ರಮಗಳನ್ನು ಗುಂಪುಸಭೆ, ಮನೆ ಭೇಟಿ, ಕಲಾ ತಂಡಗಳಿಂದ ವಿಡಿಯೋ ವಾಹನದ ಮೂಲಕ, ಪತ್ರಿಕೆ, ಜಾಥಾ, ಮುಂತಾದವುಗಳನ್ನು ಗ್ರಾಮ, ಹೋಬಳಿ, ತಾಲೂಕುವಾರು ಕೈಗೊಳ್ಳಲಾಗುವುದು. ಕ್ಷಯ ರೋಗದ ಲಕ್ಷಣಗಳ ಇಳಿಕೆಗಳಲ್ಲಿ ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯು ಸಹ ಒಂದಾಗಿದೆ ಎಂದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ತಿಪ್ಪೇಸ್ವಾಮಿ ರೆಡ್ಡಿ, ಡಾ.ನಾಗರಾಜ ಪೂಜಾರಿ, ಎಸ್.ಎಫ್.ಟಿ. ಮೇಲ್ವಿಚಾರಕರಾದ ಡಾ. ಮಂಜುನಾಥ್.ಟಿ.ಎ, ಪಂಚಾಯತ ಅಭಿವೃದ್ದಿ ಅಧಿಕಾರಿ ಶಿವಕುಮಾರ್, ಪ್ರಮುಖರಾದ ಪೂಜಾರಿ ಸಿದ್ದಯ್ಯ, ಬಿ.ಉಮೇಶ್, ಡ್ರೈವರ್ ಹುಲುಗಪ್ಪ, ಎನ್.ಹನುಮಂತ, ಅನಿಲ್, ಪೈಲ್ವಾನ್ ಸದ್ದಾಂ, ರಾಘವೇಂದ್ರ, ಲಕ್ಷ್ಮಣ್ ಭಂಡಾರಿ, ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಈಶ್ವರ, ಪ್ರಶಿಕ್ಷಣಾರ್ಥಿ ಖುರ್ಷಿದಾ ಬೇಗಂ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಾದ ಮೊಹ್ಮಮದ್ ಖಾಸಿಂ, ಭೀಮರಾಜ್ ರೆಡ್ಡಿ, ಚಿದಾನಂದ, ಅನ್ನದಾನಪ್ಪ ಅಬ್ಬಿಗೇರಿ, ಹುಲುಗಪ್ಪ, ಸಿ.ಹೆಚ್.ಒ, ಪಿ.ಹೆಚ್.ಸಿ,ಹೆಚ್.ಐ.ಒ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ತಾಯಂದಿರು, ನರೇಗಾ ಕೂಲಿ ಕಾರ್ಮಿಕರು ಭಾಗಿಯಾಗಿದ್ದರು.
ಆರೋಗ್ಯ ತಪಾಸಣೆ: ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಫ ಪರೀಕ್ಷೆ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ಕಣ್ಣಿನ ಪರೀಕ್ಷೆ ಕೈಗೊಳ್ಳಲಾಯಿತು.
------
ವಿಎಸ್‍ಕೆ ವಿಶ್ವವಿದ್ಯಾಲಯದಲ್ಲಿ ಕೌಶಲ್ಯ ಆಧಾರಿತ ಬಿಬಿಎ ಮತ್ತು ಬಿ.ಕಾಂ ಪ್ರೋಗ್ರಾಮ್‍ಗಳ ಶೈಕ್ಷಣಿಕ ಒಡಂಬಡಿಕೆ*
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಚೆನ್ನೈನ ಲಾಜಿಸ್ಟಿಕ್ಸ್ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಸಂಸ್ಥೆಯ ಶೈಕ್ಷಣಿಕ ಒಡಂಬಡಿಕೆಯು ಮುಂಬರುವ ಶೈಕ್ಷಣಿಕ ವರ್ಷದಿಂದ ಜಾರಿಯಾಗುವಂತೆ ಬುಧವಾರ ನಡೆಯಿತು.
ಮುಖ್ಯವಾಗಿ ನಿರ್ವಹಣಾಶಾಸ್ತ್ರ ಮತ್ತು ವಾಣಿಜ್ಯ ಅಧ್ಯಯನ ವಿಭಾಗದ ಪದವಿಗಳಾದ ಬಿಬಿಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಲಾಜಿಸ್ಟಿಕ್ಸ್ ಕ್ಷೇತ್ರಕ್ಕೆ ಸಂಬಂಧಿಸಿದ ಕೋರ್ಸ್‍ಗಳ ಜೊತೆಗೆ ಶೈಕ್ಷಣಿಕ ತರಬೇತಿ ನೀಡುವ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.
ಒಡಂಬಡಿಕೆಯಲ್ಲಿ ಆಯಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದು, ಅಧ್ಯಯನ ವಿಭಾಗಗಳ ಬೋಧಕ ಸಿಬ್ಬಂದಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಜ್ಞಾನಾಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದು, ಆನ್‍ಲೈನ್ ಕೋರ್ಸ್‍ಗಳು ಮತ್ತು ವಿಡಿಯೋ ಪಠ್ಯಗಳನ್ನು ಒದಗಿಸುವುದು ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನ, ಕಾರ್ಯಾಗಾರ ಆಯೋಜಿಸುವುದು ಹಾಗೂ ಆಧುನಿಕ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ಸೇರಿದಂತೆ ಇನ್ನಿತರ ಶೈಕ್ಷಣಿಕ ಸಂಬಂಧಿತ ಕಾರ್ಯಕ್ರಮಗಳಿಗೆ ಉತ್ತೇಜಿಸುವುದು ಮುಖ್ಯ ಉದ್ದೇಶಗಳಾಗಿವೆ.
ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ 9 ಸಾವಿರ ರೂ.ಗಳಿಂದ 18 ಸಾವಿರ ರೂ. ಗಳವರೆಗೆ ಮಾಸಿಕ ಪ್ರೋತ್ಸಾಹ ಧನವನ್ನು ತರಬೇತಿ ಅವಧಿಯಲ್ಲಿ ಲಾಜಿಸ್ಟಿಕ್ಸ್ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಕಡೆಯಿಂದ ವಿದ್ಯಾರ್ಥಿಗಳಿಗೆ ದೊರೆಯುತ್ತದೆ.
ವಿಶ್ವವಿದ್ಯಾಲಯದ ಕುಪತಿಗಳಾದ ಪ್ರೊ.ಸಿದ್ದು.ಪಿ ಆಲಗೂರ ಅವರ ಸಮ್ಮುಖದಲ್ಲಿ ಲಾಜಿಸ್ಟಿಕ್ಸ್ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಮುಖ್ಯಸ್ಥರ ಪರವಾಗಿ ಪ್ರೊ.ಎಸ್.ಗಣೇಶನ್, ಸ್ಕಿಲ್ಲಿಂಗ್ ಇನ್ ಸ್ಕೂಲ್ ಆ್ಯಂಡ್ ಅಕಾಡೆಮಿಯ ಅಧ್ಯಕ್ಷರಾದ ಡಾ.ಗಾಯತ್ರಿ ಹರೀಶ್ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್ ಅವರು ಒಡಂಬಡಿಕೆ ಪತ್ರವನ್ನು ಪರಸ್ಪರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಪಿ.ದಿನೇಶ್, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಜೀಲನ್ ಬಾಷಾ ಹಾಗೂ ಎರಡು ವಿಭಾಗಗಳ ಎಲ್ಲ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
--------
ಕನಕದುರ್ಗಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ : 34.1 ಲಕ್ಷ ರೂ. ಹಣ ಸೇರಿ ಬೆಳ್ಳಿ, ಬಂಗಾರ ಆಭರಣ ಸಂಗ್ರಹ*
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ): ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯ ಬುಧವಾರ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.
ಹುಂಡಿ ಎಣಿಕೆ ವೇಳೆ 267.17 ಗ್ರಾಂ ಬೆಳ್ಳಿ ಆಭರಣ ಹಾಗೂ 6.660 ಗ್ರಾಂ ಬಂಗಾರದ ಅಭರಣ ಮತ್ತು ರೂ.34,01,365 (ಫೆ.23 ರಿಂದ ಮೇ 24 ರವರೆಗೆ) ಹಣ ಸಂಗ್ರಹವಾಗಿದೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಂ.ಹೆಚ್.ಪ್ರಕಾಶ್‍ರಾವ್, ಅಧೀಕ್ಷಕರಾದ ಸಿ.ಆಂಜೀನೆಯಲು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಪಿ.ಎಂ.ರಾಜಶೇಖರ್, ಪಾರ್ವತಿ ನಗರದ ಕೆಜಿಬಿ ಬ್ಯಾಂಕ್‍ನ ವ್ಯವಸ್ಥಾಪಕರಾದ ರಾಮಲಿಂಗಪ್ಪ ಹಾಗೂ ಗಾಂಧಿನಗರ ಪೊಲೀಸ್ ಠಾಣೆಯ ಅರಕ್ಷಕ ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಹಣ ಎಣಿಕೆ ಮಾಡಲಾಯಿತು.
-------
ಬುಧವಾರ, ಮೇ 24, 2023
ಸಿರುಗುಪ್ಪ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಮೇ 25 ರಂದು
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಳೆಯ 11 ಕೆವಿ ಬ್ರೇಕರ್‍ಗಳನ್ನು ಬದಲಿಸಿ ನೂತನ ಬ್ರೇಕರ್‍ಗಳನ್ನು ಅಳವಡಿಸುವ ಕಾಮಗಾರಿಯನ್ನು ಸಿರುಗುಪ್ಪ ಕೆಪಿಟೆಸಿಎಲ್ ನಿಗಮದಿಂದ ಕೈಗೆತ್ತಿಕೊಂಡಿರುವುದರಿಂದ ಮೇ 25 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಸಿರುಗುಪ್ಪ ತಾಲೂಕಿನ ವಿವಿಧೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವ ಪ್ರದೇಶಗಳು:*
ಸಿರುಗುಪ್ಪ ಪಟ್ಟಣ ಹಾಗೂ ಕೈಗಾರಿಕಾ ಪ್ರದೇಶಗಳು ಮತ್ತು ಗ್ರಾಮೀಣ ಪ್ರದೇಶಗಳಾದ ರಾರಾವಿ, ಅರಳಿಗನೂರು, ಪೆÇಪ್ಪನಾಳ್, ಮಂಜಿನಾಳ್ ಕ್ಯಾಂಪ್, ಹಿರೆಹಾಳ್ ಕ್ಯಾಂಪ್, ಕೋಟೆಹಾಳ್ ಕ್ಯಾಂಪ್, ಕೆ.ಸುಗೂರು, ಬೆಂಚಿ ಕ್ಯಾಂಪ್, ಮುದೇನೂರು, ಕೆ.ಬೆಳಗಲ್, ಚಾಣಕನೂರು, ಅಲಬನೂರು, ಇಟ್ಟಗೆಹಾಳು, ಬಂಡ್ರಾಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬ್ರೇಕರ್ ಬದಲಾವಣೆ ಕಾಮಗಾರಿ ಪೂರ್ಣಗೊಳಿಸಲು ಸುಮಾರು 15 ದಿನಗಳ ಕಾಲಾವಧಿ (ಜೂ.10 ರವರೆಗೆ) ಬೇಕಾಗಿರುವುದಾಗಿ ಪರ್ಯಾಯ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಕೆಪಿಟಿಸಿಎಲ್ ಅಧಿಕಾರಿಗಳು ಕೋರಿರುತ್ತಾರೆ. ಬ್ರೇಕರ್‍ಗಳನ್ನು ಹೊರತುಪಡಿಸಿ ಲಭ್ಯವಿರುವ ಬ್ರೇಕರ್‍ಗಳ ಮೇಲೆ ಸಿರುಗುಪ್ಪ ನಗರ, ಕೈಗಾರಿಕಾ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವವರೆಗೂ ಅನಿವಾರ್ಯ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಸಂಭವ ಉಂಟಾಗಬಹುದಾಗಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕು.
ನೀರಾವರಿ ಪಂಪ್‍ಸೆಟ್ ಮಾರ್ಗಗಳನ್ನು ಕಾಮಗಾರಿ ನಿರ್ವಹಿಸುವ ಸಮಯದಲ್ಲಿ ಮಧ್ಯರಾತ್ರಿ 12 ರಿಂದ ಬೆಳಗ್ಗೆ 07 ರವರೆಗೆ ವಿದ್ಯುತ್ ಪೂರೈಸಲಾಗುವುದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಗ್ರಾಹಕರ ಸಂರಕ್ಷಣಾ ಕಾಯ್ದೆ: ಜೂ 01ರಂದು ಫೋನ್-ಇನ್ ಕಾರ್ಯಕ್ರಮ
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ‘ಗ್ರಾಹಕರ ಸಂರಕ್ಷಣಾ ಕಾಯ್ದೆ-2019’ರ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿಗಳಾದ ವಿಜಯಕುಮಾರ್ ಅವರೊಂದಿಗೆ ಜೂನ್ 01 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂ.080-22370477/22370488/22370499 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಅಥವಾ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ ಮೂಲಕ consumergrievances.queries@gmail.com ಗೆ ಮೇ 31 ರೊಳಗಾಗಿ ಕಳುಹಿಸಿಕೊಡಬಹುದು.
ಆಸಕ್ತ ಸಾರ್ವಜನಿಕರು, ಗ್ರಾಹಕರು ಹಾಗೂ ವಕೀಲರು ಕಳುಹಿಸಿ ಕಾರ್ಯಕ್ರಮವನ್ನು ಜೂನ್ 01ರಂದು ರೇಡಿಯೋ ಮೂಲಕ ಆಲಿಸಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ*
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
2023-24 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪೆÇ್ಲೀಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿಠಲರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜು.01 ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು https://khtigadag.ac.in/Admissionform.pdf ಲಿಂಕ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
*ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ:*
ಕರ್ನಾಟಕದ ಗದಗ ಜಿಲ್ಲೆಯ ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂನ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 ಅಭ್ಯರ್ಥಿಗಳು, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೆಂಕಟಗಿರಿಯ ಎಸ್.ಪಿ.ಕೆ.ಎಂ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-03 ಅಭ್ಯರ್ಥಿಗಳು, ಕೇರಳದ ಕಣ್ಣೂರಿನ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 44 ಅಭ್ಯರ್ಥಿಗಳ ಸೀಟ್‍ಗಳನ್ನು ಕಾಯ್ದಿರಿಸಲಾಗಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‍ಗಾಗಿ ಕರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್, ರೂ ನಂ.’ಎಫ್-22’ ಒಂದನೇ ಮಹಡಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ಅಥವಾ ಮೊ.9902772936, 9844837264 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-------
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆÉ ತರಬೇತಿ*
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತರು ಮೇ 30 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ಕೆ.ಎಲ್.ಎನ್.ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಮಂಗಳವಾರ, ಮೇ 23, 2023
ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವ ಸ್ವಚ್ಛತಾ ರಥ ವಾಹನಕ್ಕೆ ಸಿಇಒ ಚಾಲನೆ
ಸ್ವಚ್ಛತೆಗೆ ಆದ್ಯತೆ ನೀಡುವುದರ ಮೂಲಕ ಪರಿಸರ ಕಾಪಾಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಸಮುದಾಯದ ಅಭ್ಯುದಯಕ್ಕಾಗಿ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಿಂದಲೇ ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗ ರುಜಿನಗಳ ಹರಡುವಿಕೆ ತಡೆಗಟ್ಟಿ ಪರಿಸರವನ್ನು ಕಾಪಾಡಬಹುದು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೇಫ್ ಹಾಗೂ ವಲ್ರ್ಡ್ ವಿಷನ್ ಇಂಡಿಯಾ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ಜಿಲ್ಲಾ ಪಂಚಾಯತ್‍ನ ಕಚೇರಿ ಮುಂಭಾಗದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಸ್ವಚ್ಛತಾ ರಥ ವಾಹನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಅವರು ಮಾತನಾಡಿದರು.
ಈ ವಾಹನವು ಬಳ್ಳಾರಿ ತಾಲೂಕಿನ ಸುಮಾರು 66 ಗ್ರಾಮಗಳಲ್ಲಿ ಸಂಚರಿಸಲಿದೆ.
ಶೌಚಾಲಯ ಬಳಕೆಯ ಮಹತ್ವ, ಹಸಿ ಕಸ, ಒಣ ಕಸ ವಿಂಗಡಣೆ ಮತ್ತು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಚಕ್ರ ಮತ್ತು ನೈರ್ಮಲ್ಯದ ಕುರಿತು, ಕೈತೊಳೆಯುವ ವಿಧಾನಗಳು, ಮಕ್ಕಳಿಗೆ ಒಂದು ವರ್ಷ ವಯಸ್ಸಿನೊಳಗೆ ನೀಡುವ ಲಸಿಕೆಗಳ ಮೂಲಕ ಬಾಲ್ಯದಲ್ಲಿ ಕಾಡುವ ರೋಗಗಳ ನಿಯಂತ್ರಣ, ಬಾಲ್ಯವಿವಾಹ ತಡೆಗಟ್ಟುವಿಕೆ ಮಾಹಿತಿಯನ್ನ ಆಡಿಯೋ ಕ್ಲಿಪ್ಲಿಂಗ್‍ಗಳ ಮೂಲಕ ಜಾಗೃತಿ ಮೂಡಿಸಲಾಗುವುದು.
ಸ್ವಚ್ಛತೆಯ ಕುರಿತು ಕರಪತ್ರಗಳೊಂದಿಗೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ಮಾಹಿತಿ ನೀಡಲಾಗುವುದು. ಎಲ್ಲರೂ ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಚ್ಛತೆ ಕುರಿತು ಮಾಹಿತಿ ಇರುವ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕ ಪ್ರಮೋದ್.ಸಿ,
ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್‍ಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮತ್ತು ವಲ್ರ್ಡ್ ವಿಷನ್ ಇಂಡಿಯಾ ಎಡಿಪಿ ವ್ಯವಸ್ಥಾಪಕಿ ಪ್ರೇಮಲತಾ ಸೇರಿದಂತೆ ಜಿಲ್ಲಾ ಪಂಚಾಯತ್‍ನ ಸ್ವಚ್ಛ ಭಾರತ ತಂಡದ ಸಿಬ್ಬಂದಿಯವರು ಹಾಜರಿದ್ದರು.
-------
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಮೇ 26 ರಂದು
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮುಂಬರುವ ಮುಂಗಾರು ಮಳೆ ಮತ್ತು ಪ್ರವಾಹ ಸ್ಥಿತಿಯನ್ನು ನಿಭಾಯಿಸಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ಮಧ್ಯಾಹ್ನ 03 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಂಭಾಗಣದಲ್ಲಿ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ಝುಬೇರಾ ಅವರು ಪ್ರಕಟಣೆಯಲ್ಲಿ ತಿಳಸಿದ್ದಾರೆ.
--------
ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಮೀನುಗಾರಿಕೆ ಇಲಾಖೆಯಿಂದ 2023-24 ನೇ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ರಾಜ್ಯವಲಯ ಯೋಜನೆಗಳು:*
ಜಲಾಶಯ, ನದಿಭಾಗದ, ಕೆರಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಹರಿಗೋಲು ಖರೀದಿಗೆ ಸಹಾಯಧನ. ಮೀನುಮರಿ ಖರೀದಿಸಲು ನೆರವು ಯೋಜನೆ. ಕೆರೆ, ಜಲಾಶಯಗಳ ಅಂಚಿನ ಕೊಳೆಗಳಲ್ಲಿ ಮೀನುಮರಿ ಪಾಲನೆಗೆ ನೆರವು. ಕೆರಯನ್ನು ಗುತ್ತಿಗೆಗೆ ಪಡೆದ ಮೀನುಗಾರಿಕೆ ಸಹಕಾರ ಸಂಘ, ವ್ಯಕ್ತಿಗಳಿಗೆ ಮೀನುಮರಿ ಬಿತ್ತನೆಗೆ ಸಹಾಯಧನ ನೆರವು ನೀಡಲಾಗುವುದು.
ಅರ್ಹ ಫಲಾನುಭವಿಗಳು ಆನ್‍ಲೈನ್‍ನ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸಲ್ಲಿಸಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳೊಡನೆ ಆಯಾ ತಾಲೂಕಿನ ಮೀನುಗಾರಿಗೆ ಇಲಾಖೆಯ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ತಾಲೂಕು ವ್ಯಾಪ್ತಿಗೆ ಶಿವಣ್ಣ-ಮೊ.9449593156 ಹಾಗೂ ಸಂಡೂರು ವ್ಯಾಪ್ತಿಗೆ ಜಿ.ಶಾಂತಕುಮಾರ್-ಮೊ.9620177588 ಇವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ವಿಶ್ವ ಸ್ಕಿಜೋಪ್ರೇನಿಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಮೇ 25 ರಂದು
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಡಿಯಲ್ಲಿ ‘ವಿಶ್ವ ಸ್ಕಿಜೋಪ್ರೆನಿಯ ದಿನಾಚರಣೆ’ ಅಂಗವಾಗಿ ‘ಸಮಾಜದ ದಯಾಳುತನದ ಶಕ್ತಿಯನ್ನು ಆಚರಿಸುವುದು’ ಎಂಬ ಘೋಷವಾಕ್ಯದೊಂದಿಗೆ ಮೇ 25 ರಂದು ಬೆಳಗ್ಗೆ 09.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮೇ 24 ರಂದು
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಮೇಲೆ ಇರುವ ಫೀಡರ್‍ಗಳ ಸಿ.ಟಿ ಬದಲಾಯಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು:*
ವಿನಾಯಕ ನಗರ, ಕಂಟೋನ್‍ಮೆಂಟ್, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್‍ಬಜಾರ್ ಮೇನ್ ರೋಡ್, ಟೈಲರ್ ಬೀದಿ, ಕುವೆಂಪು ನಗರ, ಜಯನಗರ, ಚಂದ್ರ ಕಾಲೋನಿ, ರಾಮಾಂಜನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‍ಮೆನ್ ಕಾಲೋನಿ, ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ಟ್ರಾಮಾಕೇರ್ ಸೆಂಟರ್, ಜಲ ಶುದ್ಧೀಕರಣ ಕೇಂದ್ರ ಇನ್ನೂ ಮುಂತಾದ ಏರಿಯಾಗಳು, ಕೊಳಗಲ್ಲು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 24 ರಂದು
ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಹೊಸ ಬ್ಯಾಂಕ್-4 ಅಳವಡಿಸುವ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮೇ 24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:*
ಎಫ್-39 ಅಲ್ಲಿಪುರ ನಗರಪ್ರದೇಶ ಫೀಡರ್ ಮಾರ್ಗದ ಅಲ್ಲಪುರ ಗ್ರಾಮ, ಬೈ ಪಾಸ್ ರೋಡ್. ಎಫ್-74 ಗೌತಮ್ ನಗರ ಎನ್.ಜೆ.ವೈ ಫೀಡರ್ ಮಾರ್ಗದ ಡಿಸಿ ನಗರ, ಪ್ರ್ರಶಾಂತ ನಗರ, ಆಲದಹಳ್ಳಿ ಗ್ರಾಮ. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
-------
ಸೋಮವಾರ, ಮೇ 22, 2023
ಮೇ 23 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದ ಎಫ್-24 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 23 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ನಗರದ ಬೆಂಗಳೂರು ರಸ್ತೆ, ರಾಣಿ ತೋಟ, ಬಾಪೂಜಿ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಮಹಿಳೆ ಕಾಣೆ: ದೂರು ದಾಖಲು
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ತೋರಣಗಲ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶೀಲಾದೇವಿ ಎನ್ನುವ 30 ವóರ್ಷದ ಮಹಿಳೆ ಫೆ.06 ರಂದು ಕಾಣೆಯಾಗಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.4 ಅಡಿ, ತೆಳುವಾದ ಮೈಕಟ್ಟು, ದುಂಡು ಮುಖ, ಕಂದು ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಗೀರುಗಳುಳ್ಳ ಸೀರೆ, ಹಸಿರು ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಹಿಂದಿ ಮತ್ತು ಭೋಜಪುರಿ ಭಾಷೆ ಮಾತನಾಡುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಮಹಿಳೆ ಬಗ್ಗೆ ಮಾಹಿತಿ ದೊರೆತಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062, ಸಂಡೂರು ವೃತ್ತದ ಸಿ.ಪಿ.ಐ ದೂ.08395-260100, ಮೊ.9480803036, ತೋರಣಗಲ್ಲು ಡಿವೈ.ಎಸ್.ಪಿ. ಮೊ.9480803010, ಬಳ್ಳಾರಿ ಎಸ್.ಪಿ ದೂ.08392-258300, ಬಳ್ಳಾರಿ ಕಂಟ್ರೋಲ್ ರೂಂ ಮೊ.08392-279100 ಗೆ ಸಂಪರ್ಕಿಸಬಹುದಾಗಿದೆ.
------
ಯುವಕ ನಾಪತ್ತೆ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ಕುರುಗೋಡು ಪಟ್ಟಣದ ನೀಲಮ್ಮ ಮಠದ ಹತ್ತಿರದ 10 ನೇ ವಾರ್ಡ್‍ನ ನಿವಾಸಿ ಸಿ. ಹರಿಅಚ್ಯುತ ಎನ್ನುವ 21 ವರ್ಷದ ಯುವಕ ಮೇ 21 ರಂದು ಕಾಣೆಯಾಗಿರುವ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಕನ ಚಹರೆ ಗುರುತು: ಸುಮಾರು 5.2 ಅಡಿ ಎತ್ತರ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ, ದುಂಡುಮುಖ ಹೊಂದಿರುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ದೊರೆದಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433, ಮೊ.9480803051, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ 8ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ನಗರದ ಕಂಟೋನ್‍ಮೆಂಟ್‍ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ 2023-24ನೇ ಸಾಲಿಗೆ 8 ನೇ ತರಗತಿಗೆ ಪ್ರವೇಶ ಬಯಸುವ 7 ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
7ನೇ ತರಗತಿ ಉತ್ತೀರ್ಣರಾದ ಕನ್ನಡ ಅಥವಾ ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರವೇಶಕ್ಕಾಗಿ ಅರ್ಜಿಗಳನ್ನು ಕಚೇರಿ ಸಮಯದಲ್ಲಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 08 ರೊಳಗೆ ಶಾಲೆಯ ಕಚೇರಿಗೆ ಸಲ್ಲಿಸಬೇಕು.
*ಸೌಲಭ್ಯಗಳು:*
ಈ ಶಾಲೆಯಲ್ಲಿ (ಜೆಟಿಎಸ್) ಓದಿದ ವಿದ್ಯಾರ್ಥಿಗಳಿಗೆ ಡಿಪ್ಲೋಮಾ (ಪಾಲಿಟೆಕ್ನಿಕ್) ಕಾಲೇಜುಗಳಲ್ಲಿ ಪ್ರತಿ ವಿಭಾಗದಲ್ಲಿಯೂ ವಿಶೇಷ ಕೋಟಾ (ಜೆಟಿಎಸ್) ಅಡಿಯಲ್ಲಿ ನೇರವಾಗಿ ಪ್ರವೇಶ ಸಿಗುತ್ತದೆ. ಡಿಪ್ಲೋಮಾ (ಪಾಲಿಟೆಕ್ನಿಕ್) ಮತ್ತು ಇಂಜಿನೀಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ, ಜೆಟಿಎಸ್‍ನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕಿUಇSಖಿ ಕಂಪನಿ ಮಾಲೀಕರು (ಜೆಟಿಎಸ್ ಹಳೆಯ ವಿದ್ಯಾರ್ಥಿ) ಉಚಿತ ಶುಲ್ಕ ಹಾಗೂ ಅವರದೇ ಕಂಪನಿ ಮತ್ತು ಬೇರೆ ಬೇರೆ ಕಂಪನಿಗಳಲ್ಲಿ ಉದ್ಯೋಗ ಕೊಡಿಸಲು ಸಹಕರಿಸುತ್ತಾರೆ. ಪ್ರತಿ ವರ್ಷ 8, 9 ಹಾಗೂ 10ನೇ ತರಗತಿಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಿUಇSಖಿ ಉಟobಚಿಟ ಕಂಪನಿ ವತಿಯಿಂದ ಎಲ್ಲರಿಗೂ ಸೇರಿ ರೂ.1 ಲಕ್ಷಗಳ ಬಹುಮಾನ ನೀಡಲಾಗುವುದು.
ಜೆಟಿಎಸ್‍ನಲ್ಲಿ ಓದಿದ ವಿದ್ಯಾರ್ಥಿಗಳು ಹೈಸ್ಕೂಲ್ ಹಂತದಲ್ಲಿಯೇ ತಾಂತ್ರಿಕ ಶಿಕ್ಷಣವನ್ನು ಪಡೆಯುವುದರಿಂದ ತಮ್ಮ ಸ್ವಂತ ಬುದ್ಧಿಶಕ್ತಿಯಿಂದ ಉದ್ಯೋಗ ಮಾಡಲು ಶಕ್ತರಾಗುವರು. ಪ್ರತಿ ವರ್ಷ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ತಲಾ ರೂ.2500 ಗಳಂತೆ ಸ್ಕಾಲರ್‍ಶಿಪ್ (ಶಿಷ್ಯವೇತನ) ನೀಡಲಾಗುವುದು. ಸುಸಜ್ಜಿತ ವರ್ಗಕೋಣೆಗಳು, ಪ್ರಯೋಗಾಲಯಗಳು, ಗ್ರಂಥಾಲಯ ಮತ್ತು ವಿಶಾಲವಾದ ಆಟದ ಮೈದಾನ ಸೌಲಭ್ಯವಿದೆ. ಈ ಶಾಲೆಯಲ್ಲಿ ಓದಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ISRO, DRDO, HOMIBABA NUCLEAR INSTITUTE ಇನ್ನೂ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನುರಿತ ಉಪನ್ಯಾಸಕರಿಂದ ಬೋಧನೆ ನೀಡಲಾಗುವುದು ಹಾಗೂ ಪಠ್ಯಪುಸ್ತಕ ಮತ್ತು ನೋಟ್ಸ್ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್‍ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆ ಅಥವಾ 08392-294005, 8073441063, 8867255590 ಮತ್ತು 9880867654 ಗೆ ಸಂಪರ್ಕಿಸಬಹುದು ಎಂದು ಸಕಾರಿ ತಾಂತ್ರಿಕ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ಮೇ 23 ರಿಂದ
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಮಾಲಪಾಟಿ ಆದೇಶ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 03 ರವರೆಗೆ ಒಟ್ಟು 06 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಬಳ್ಳಾರಿ-04, ಸಿರುಗುಪ್ಪ-01, ಸಂಡೂರು-01 ಸೇರಿ ಒಟ್ಟು 06 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 01.30 ರವರೆಗೆ ಹಾಗೂ ಮಧ್ಯಾಹ್ನ 02.15 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.
ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿμÉೀಧಿಸಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದೆ.
ಮೇ 23 ರಿಂದ ಜೂನ್ 03 ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ
ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮೊಹಮ್ಮದ್ ಝುಬೇರಾ ಸೂಚನೆ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಿಂದ ಜೂನ್ 03 ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ದ್ವಿತೀಯ ಪಿಯು ಪೂರಕ ಪರೀಕ್ಷೆಗಳ ಸಿದ್ಧತೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್, ಎಎಸ್‍ಎಮ್ ಬಾಲಕಿಯರ ಪಿಯು ಕಾಲೇಜ್, ವಾಡ್ರ್ಲಾ ಪಿಯು ಕಾಲೇಜ್, ಎಸ್‍ಜಿ ಪಿಯು ಕಾಲೇಜ್, ಸಿರುಗುಪ್ಪದ ಎಸ್‍ಇಎಸ್ ಪಿಯು ಕಾಲೇಜ್ ಹಾಗೂ ಸಂಡೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸೇರಿ ಒಟ್ಟು 06 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿವೆ ಎಂದರು.
ಆಯಾ ಪರೀಕ್ಷಾ ಕೇಂದ್ರದ ಕಾಲೇಜಿನ ಪ್ರಾಚಾರ್ಯರು ಪರೀಕ್ಷೆಗೆ ಮುಖ್ಯ ಅಧೀಕ್ಷಕರಾಗಿರುತ್ತಾರೆ. ಯಾವುದೇ ಪರೀಕ್ಷಾ ಆಕ್ರಮಗಳಿಗೆ ಆಸ್ಪದವಿಲ್ಲದಂತೆ ಹಾಗೂ ಶಿಸ್ತುಬದ್ಧವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಯಾವುದೇ ತರಹದ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಸ್ಮಾರ್ಟ್ ವಾಚ್, ಸೈಂಟಿಫಿಕ್ ಕ್ಯಾಲ್ಕುಲೇಟರ್, ಬ್ಲೂ-ಟೂತ್, ಪೇಜರ್ ಇತ್ಯಾದಿ ಉಪಕರಣಗಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದ ಜೊತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕು ಎಂದು ಹೇಳಿದರು.
ಗೌಪ್ಯ ಬಂಡಲ್‍ಗಳನ್ನು ಸಾಗಿಸುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸೂಕ್ತ ಪೆÇಲೀಸ್ ಬೆಂಗಾವಲನ್ನು ನೀಡಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಬಂದೋಬಸ್ತ್ ಕಾರ್ಯಕ್ಕಾಗಿ ಸೂಕ್ತ ಪೆÇಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ, ಬೇರೆ ಯಾವ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಿಸಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೆಂಕಟ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
-------
ಶನಿವಾರ, ಮೇ 20, 2023
ಪಿ.ಎಂ ಕಿಸಾನ್ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಕಡ್ಡಾಯ - ಡಾ.ಎನ್.ಕೆಂಗೇಗೌಡ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲವೆಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಇಲಾಖೆಯಿಂದ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿರುವುದಿಲ್ಲ. ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದು ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಬಹುದು.
*ಈ ವಿಧಾನಗಳಲ್ಲಿಯೂ ಇ-ಕೆವೈಸಿ ಮಾಡಬಹುದು:* ತಮ್ಮ ಸಮೀಪದ ಗ್ರಾಮ, ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಫಲಾನುಭವಿಗಳು ಸ್ವತ: ತಾವೇ ಪಿ.ಎಂ ಕಿಸಾನ್ ಪೆÇೀರ್ಟೆಲ್ ಮೂಲಕ ಮೊಬೈಲ್ ಒಟಿಪಿ ಪಡೆದು ಇ-ಕೆವೈಸಿ ಮಾಡಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೆÇೀಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ-ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆಪ್ ಪ್ಲೇ ಸ್ಟೋರ್‍ನಲ್ಲಿ (Play Store) ಡೌನ್ ಲೋಡ್ (Download) ಮಾಡಿಕೊಂಡು ಆಪ್ ಮೂಲಕ ಸ್ವತ: ಫಲಾನುಭವಿಗಳೇ ಮುಖ ಚಹರೆ ತೋರಿಸುವ ಮೂಲಕ (Facial Authentication) ಇ-ಕೆವೈಸಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
----------
6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಾಷು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಶಾಲೆಗಳ ವಿವರ:* ವಸತಿ ರಹಿತ ಶಾಲೆಗಳಾದ ಅಲ್ಲೀಪುರದ ವಿಶ್ವೇಶ್ವರಯ್ಯ ಪ್ರೌಢ ಶಾಲೆ (ಬೆಸ್ಟ್ ಸ್ಕೂಲ್), ವಿದ್ಯಾನಗರದ ನಂದ ವಸತಿ ಶಾಲೆ, ಬೆಳಗಲ್ ಕ್ರಾಸ್‍ನ ನಂದಿ ಪೌಢಶಾಲೆ (ಸಿ.ಬಿ.ಎಸ್.ಇ). ವಸತಿ ಸಹಿತ ಶಾಲೆಗಳಾದ ಸಿರುಗುಪ್ಪ ವಿಜಯಮೇರಿ ಪ್ರಾಥಮಿಕ ಶಾಲೆ, ದಮ್ಮೂರಿನ ಬೃಂದಾ ಇಂಟರ್‍ನ್ಯಾಷನಲ್ ಸ್ಕೂಲ್.
ಪರಿಶಿಷ್ಟ ಜಾತಿಯ 50 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
*ಅರ್ಹತೆಗಳು:* ಪರಿಶಿಷ್ಟ ಜಾತಿಯ ವಿದ್ಯಾರ್ಥಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷ ಒಳಗಿರಬೇಕು. ಅಭ್ಯರ್ಥಿಯು 5 ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. ಅಭ್ಯರ್ಥಿಯ ವಾಸಸ್ಥಳ ದಾಖಲಾತಿ ನೀಡಬೇಕು.
*ಬೇಕಾದ ದಾಖಲೆಗಳು:* 5 ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ವಾಸಸ್ಥಳ ಪ್ರಮಾಣ ಪತ್ರ, ವಿದ್ಯಾರ್ಥಿಯ ಪಾಸ್‍ಪೋರ್ಟ್ ಸೈಜ್ ಫೋಟೋ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ, ಮುಖ್ಯೋಪಾಧ್ಯಾಯರಿಂದ ನಡತೆ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಹಾಗೂ ಇತರೆ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮೇ 25 ರೊಳಗೆ ಆಯಾ ತಾಲೂಕಿನ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೌಲ್‍ಬಜಾರ್ ಮೊದಲನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಹಾಯಕ ನಿರ್ದೇಶಕರ ಕಚೇರಿ ಅತವಾ ದೂ.08392-244738, ಮೊ.9480843073 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
--------
ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
2022-23 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ಇತರೆ ಇಲಾಖೆಯ ಶಾಲೆಗಳಲ್ಲಿನ 06 ವಿದ್ಯಾರ್ಥಿಗಳನ್ನು, ಜಿಲ್ಲೆಯ ಐದು ತಾಲೂಕುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ 20 ವಿದ್ಯಾರ್ಥಿಗಳನ್ನು ಹಾಗೂ ಬಡತನದಲ್ಲಿಯೂ ಕಷ್ಟ ಪಟ್ಟು ಅಭ್ಯಾಸ ಮಾಡಿ ಉತ್ತಮ ಅಂಕ ಪಡೆದ 12 ವಿದ್ಯಾರ್ಥಿಗಳು ಮತ್ತು ಬಾಲಮಂದಿರದ 04 ವಿದ್ಯಾರ್ಥಿಗಳನ್ನೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಸನ್ಮಾನಿಸಿ, ಗೌರವಿಸಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಅವರು, ಫಲಿತಾಂಶ ಸುಧಾರಣೆಗೆ ಏಕರೂಪದ ವಾರ್ಷಿಕ ಕ್ರಿಯಾಯೋಜನೆ, ವರ್ಕಬುಕ್ ಸಿದ್ದತೆ, ಮಾಸಿಕ ಎರಡು ಯೂನಿಟ್ ಟೆಸ್ಟ್, ಪ್ರಶ್ನಾಕೋಠಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮ, ಶ್ರದ್ಧೆಗಳಿಂದ ನಿಗಧಿತ ಗುರಿ ತಲುಪಲು ಸಾಧ್ಯ ಎಂದು ತಿಳಿಸಿದರು.
ಮುಂದಿನ ವರ್ಷ ಫಲಿತಾಂಶ ಸುಧಾರಣೆಗೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಶ್ರಮಿಸಲು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಉತ್ತಮ ಫಲಿತಾಂಶ ತರದ ಮುಖ್ಯೋಪಾಧ್ಯಾಯರಿಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಅವರು ಮಾತನಾಡಿ, ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಗುರು ವೃಂದದವರು ಹಾಗೂ ಅಧಿಕಾರಿಗಳು, ಪೋಷಕರನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಸರ್ಕಾರಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ಸೂರಯ್ಯ ಬೇಗಂ, ಸತ್ಯನಾರಾಯಣ, ಆರೋಗ್ಯದಾಸ್ ಸೇರಿದಂತೆ ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕಿನ ನೋಡಲ್ ಅಧಿಕಾರಿಗಳು ಹಾಗೂ ಪಾಲಕರು ಹಾಜರಿದ್ದರು.
ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಮೈಸೂರಿನ ಭಾರತೀಯ ರಂಗಶಿಕ್ಷಣ ಕೇಂದ್ರದಿಂದ 2023-24 ನೇ ಸಾಲಿನಲ್ಲಿ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೋಮಾ ಕೋರ್ಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2023-24ನೇ ಸಾಲಿನ ಈ ರಂಗ ತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ 18 ವರ್ಷ ತುಂಬಿದ ಮತ್ತು 28 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಪ್ರತಿ ತಿಂಗಳು 5 ಸಾವಿರ ರೂ.ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್‍ಸೈಟ್http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180 (ರಂಗಕೈಪಿಡಿ ಶುಲ್ಕ ರೂ.30 ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 05 ರೊಳಗಾಗಿ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸÀಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುವುದು. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.0821-2512639, 9448938661, 9148827720, 8867514311 ಗೆ ಸಂಪರ್ಕಿಸಬಹುದು ಎಂದು ಮೈಸೂರು ರಂಗಾಯಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಮೇ 22 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ಮತ್ತು ಇತ್ಯರ್ಥಪಡಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಮೇ 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ವರೆಗೆ ಗ್ರಾಮೀಣ ಜೆಸ್ಕಾಂ ಉಪ-ವಿಭಾಗದ ಕಚೇರಿಯಲ್ಲಿ ನಡೆಸಲಾಗುವುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಭಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 22 ರಂದು
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿನ 110/11ಕೆ.ವಿ ಮೀನಹಳ್ಳಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಮೆ.ಎ-ಒನ್ ಗೋಲ್ಡ್ ಪೈಪ್ಸ್ ಮತ್ತು ಟ್ಯೂಬ್ಸ್ ಕಾರ್ಖಾನೆಗೆ ಹೊಸ ಎಕ್ಸ್‍ಪ್ರೆಸ್ 11ಕೆ.ವಿ ಮಾರ್ಗದ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 04 ರಿಂದ ಈ ಮಾರ್ಗದ 11 ಕೆವಿ ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು: ಎಫ್-2 ಫೀಡರ್‍ನ ಚಾಗನೂರು ಐಪಿ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಕೃಷಿ ಪ್ರದೇಶ. ಎಫ್-1 ಫೀಡರ್‍ನ ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಗ್ರಾಮಗಳು ಹಾಗೂ ಮೆ. ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
---------
ಕಂಪ್ಲಿ: ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಕಂಪ್ಲಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ 2023-24 ನೇ ಸಾಲಿನ ಪ್ರಥಮ ವರ್ಷದ ವಿವಿಧ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭವಾಗಿದೆ.
*ಕೋರ್ಸ್‍ಗಳ ವಿವರ: ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗಗಳಿಗೆ ಪ್ರವೇಶಾತಿ ಆರಂಭವಾಗಿವೆ.
*ಬೇಕಾದ ದಾಖಲೆಗಳು:* ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, 1 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಪ್ರಮಾಣ ಪತ್ರ(ಕನಿಷ್ಟ 5 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಮಾಣ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್ ಮತ್ತು 10 ಭಾವಚಿತ್ರಗಳು.
*ವಿದ್ಯಾರ್ಹತೆ:* ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ರೊಂದಿಗೆ ಉತ್ತೀರ್ಣರಾಗಿರಬೇಕು. 3ನೇ ಸೆಮಿಸ್ಟರ್‍ಗೆ ನೇರವಾಗಿ (ಲ್ಯಾಟರಲ್ ಎಂಟ್ರಿ) ಮೂಲಕ ಪ್ರವೇಶ ಪಡೆಯಲು ಪಿಯುಸಿ (ವಿಜ್ಞಾನ) ಅಥವಾ ಐಟಿಐ ನಲ್ಲಿ ಉತ್ತೀರ್ಣರಾಗಿರಬೇಕು.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು
ಆಸಕ್ತಿಯುಳ್ಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾಹಿತಿಗಾಗಿ ಮೊ.9482994340, 9448918752, 9880509725 ಗೆ ಸಂಪರ್ಕಿಸಬಹುದು ಎಂದು ಕಂಪ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ ಪ್ರಾಂಶುಪಾಲರಾದ ಬಾಲಾಂಜಿನೇಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿ ಹಿನ್ನಲೆ
ಕಾಮಗಾರಿ ಪ್ರದೇಶ ಸುತ್ತ-ಮುತ್ತ ಪ್ರತಿಬಂಧಕಾಜ್ಞೆ ಜಾರಿ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ತಾಲೂಕಿನ ಮೋಕಾ ಹೋಬಳಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿ ನಡೆಯುವ ಸ್ಥಳದ ಸುತ್ತ-ಮುತ್ತಲಿನ ಪ್ರದೇಶವನ್ನು ಸಿಆರ್‍ಪಿಸಿ ಕಾಯ್ದೆ 1973 ಕಲಂ 144 ರನ್ವಯ ಮೇ 27 ರವರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಬಳ್ಳಾರಿ ತಾಲೂಕು ದಂಡಾಧಿಕಾರಿಯಾಗಿರುವ ತಹಶೀಲ್ದಾರ ಬಲರಾಮ ಕಟ್ಟಿಮನಿ ಅವರು ಪ್ರತಿಬಂಧಕಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಮೋಕಾ ಠಾಣಾ ವ್ಯಾಪ್ತಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿಯು ನಡೆಯುತ್ತಿದ್ದು, ಕಾಮಗಾರಿ ಸಮಯದಲ್ಲಿ ಬ್ಯಾಲಚಿಂತೆ ಮತ್ತು ಬಿಡಿ ಹಳ್ಳಿ ಗ್ರಾಮಗಳ ಗ್ರಾಮಸ್ಥರು ಹಾಗೂ ಮಹಿಳೆಯರು ಪ್ರತಿಭಟನೆ ಮಾಡುವ ಹಾಗೂ ಕಾಮಗಾರಿಗೆ ತೊಂದರೆ (ಆಡಚಣೆ) ಮಾಡಿ ಕಾನೂನು ಸುವ್ಯವಸ್ಥೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿಂದ ನಿರ್ಭಂಧಿತ ಪ್ರದೇಶವೆಂದೂ ಘೋಷಿಸಲಾಗಿದೆ. ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಷರತ್ತು ವಿಧಿಸಲಾಗಿದೆ.
*ಷರತ್ತುಗಳು:* ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್‍ನ ಕಾಮಗಾರಿ ನಡೆಯುವ ಸ್ಥಳದ ಸುತ್ತ-ಮುತ್ತ ಪ್ರದೇಶದಲ್ಲಿ 05 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿμÉೀಧಿಸಿದೆ.
ಶಸ್ತ್ರ, ಬಡಿಗೆ, ಬರ್ಚ್, ಖಡ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು ಕಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿμÉೀಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ತಾನನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.
ಯಾವುದೇ ವ್ಯಕ್ತಿ ಅಥವಾ ಸಾರ್ವಜನಿಕರಾಗಲೀ ಮೇಲೆ ವಿವರಿಸಿದ ಮಾರಕಾಸ್ತ್ರಗಳು ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳುವ ಅಧಿಕಾರ ಯಾವುದೇ ಪೆÇಲೀಸ್ ಅಧಿಕಾರಿಗಳಿಗೆ ಇರುತ್ತದೆ. ಅಂದರೆ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗಲು ಮಾಡಿಕೊಳ್ಳಲಾಗುವುದು.
ಈ ಆದೇಶವು ಶವ ಸಂಸ್ಕಾರಕ್ಕೆ ಅಥವಾ ಮದುವೆ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)





































