ಮಂಗಳವಾರ, ಮೇ 2, 2023

ವ್ಯಕ್ತಿ ಕಾಣೆ ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ): ಕುಡುತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನಪುರ ಗ್ರಾಮದ ಲೇಬರ್ ಕಾಲೋನಿಯಲ್ಲಿ ಕೆಲಸಕ್ಕಾಗಿ ಬಂದಿದ್ದ ಪಶ್ಚಿಮ ಬಂಗಾಳ ರಾಜ್ಯದ ಬಿರ್ ಬುಹುಂ ಜಿಲ್ಲೆಯ ನಿವಾಸಿ ಗಾಂಡುಕಿಸ್ಕು ಎನ್ನುವ 37 ವರ್ಷದ ವ್ಯಕ್ತಿ ಏ.17 ರಂದು ಕಾಣೆಯಾಗಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕುಡುತಿನಿ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸುಮಾರು 5.4 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಹಿಂದಿ, ಬೆಂಗಾಲಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಬಿಳಿ ಬಣ್ಣದ ಕಪ್ಪು ಗೀರುಗಳುಳ್ಳ ಶರ್ಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ಮೊ.9880777698, ಎಸ್.ಪಿ ಬಳ್ಳಾರಿ ಅವರ ದೂ.08932-258400 ಗೆ ಸಂಪರ್ಕಿಸಬಹುದಾಗಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ