ಮಂಗಳವಾರ, ಮೇ 2, 2023

ಮೇ 03 ರಂದು ಮತದಾನ ಜಾಗೃತಿ ಜಾಥಾ ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ಮೇ 03 ರಂದು ಬೆಳಗ್ಗೆ 08.30 ಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಿಂದ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ಅವರು ಚಾಲನೆ ನೀಡುವರು. ಮತದಾನ ಜಾಗೃತಿ ಜಾಥಾವು ಜಿಲ್ಲಾ ನ್ಯಾಯಾಲಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸತೀಶ್ ಜೆ.ಬಾಳಿ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ