ಗುರುವಾರ, ಮೇ 4, 2023
ವಿಧಾನಸಭೆ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಅಂಗವಾಗಿ ಚುನಾವಣಾ ಆಯೋಗವು ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು 'ಪುಜಾಪ್ರಭುತ್ವದ ಹಬ್ಬ'ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ-2023 ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
*ಬಹುಮಾನಗಳ ವಿವರ:*
ಪಥಮ ಬಹುಮಾನ 25,000 ರೂ., ದ್ವಿತೀಯ ಬಹುಮಾನ 15,000 ರೂ., ತೃತೀಯ ಬಹುಮಾನ 10,000 ರೂ., ಸಮಾಧಾನಕರ ಬಹುಮಾನ 6,000 ರೂ ಹಾಗೂ ವಿಶೇಷ ಬಹುಮಾನ 5,000 ರೂ. ಗಳನ್ನು ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ: ktkceomedia2023@gmail.com ಗೆ ಮೇ 20 ರ ಶನಿವಾರ ಸಂಜೆ 5 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ