ಶನಿವಾರ, ಮೇ 6, 2023

ತೋಟಗಾರಿಕೆ ಇಲಾಖೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ* ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕಾರ್ಯಕ್ರಮಗಳಾದ ಬದು ನಿರ್ಮಾಣ, ಕೃಷಿಹೊಂಡ, ಇಂಗುಗುಂಡಿ ಮತ್ತು ಬಸಿಗಾಲುವೆ ನಿರ್ಮಾಣ ಕಾಮಗಾರಿಗಳಿಗೆ ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಲ್ಲಿ ಸಪೆÇೀಟ, ದಾಳಿಂಬೆ, ಪೇರಲ, ಪಪ್ಪಾಯ, ಮಾವು, ಡ್ರ್ಯಾಗನ್ ಹಣ್ಣು, ತೆಂಗು, ತಾಳೆ ಹಾಗೂ ಇತರೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಕೂಲಿ ಮತ್ತು ಸಾಮಾಗ್ರಿ ವೆಚ್ಚವನ್ನು ಆನ್ ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಇರುತ್ತದೆ. ಆಸಕ್ತ ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಉದ್ಯೋಗ ಚೀಟಿ, ಬಿಪಿಎಲ್ ಜೆರಾಕ್ಸ್ ಪ್ರತಿ ಅಥವಾ ಎಸ್‍ಸಿ/ಎಸ್‍ಟಿ ಜಾತಿ ಪ್ರಮಾಣ ಪ್ರತಿ ಜೆರಾಕ್ಸ್ ಅಥವಾ ಸಣ್ಣ ರೈತರ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ, ತಾಂತ್ರಿಕ ಸಹಾಯಕರು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಯೋಗೇಶ್ವರ.ಹೆಚ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ