ಬುಧವಾರ, ಮೇ 10, 2023

ಮತ ಚಲಾಯಿಸಿದ ಡಿಸಿ, ಜಿಪಂ ಸಿಇಒ ಬಳ್ಳಾರಿ,ಮೇ 10(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಬುಧವಾರ ನಡೆದ ಮತದಾನ ದಿನದಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಮತಗಟ್ಟೆ 123 ರ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರದಿ ಸಾಲಿನಲ್ಲಿ ನಿಂತು ತಮ್ಮ ಮತದಾನ ಹಕ್ಕು ಚಲಾಯಿಸಿದರು. ಮತ ಹಕ್ಕು ಚಲಾಯಿಸಿ ಬಳಿಕ ಮತನಾಡಿದ ಅವರು, ಪ್ರಜಾಪ್ರಭುತ್ವ ಹಬ್ಬದಲ್ಲಿ ನನ್ನ ಮತದ ಹಕ್ಕನ್ನು ಚಲಾಯಿಸಿದ್ದೇನೆ. ಜಿಲ್ಲೆಯ ಎಲ್ಲಾ ಕ್ಷೇತ್ರದ ಮತದಾರರು ತಮ್ಮ ಮತವನ್ನು ಚಲಾಯಿಸಿರಿ ಎಂದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಮತಗಟ್ಟೆ ಸಂಖ್ಯೆ 128 ರ ರೈಲ್ವೆ ಕಾಲೋನಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಹಕ್ಕು ಚಲಾಯಿಸಿದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ