ಶುಕ್ರವಾರ, ಮೇ 12, 2023

ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ತರಬೇತಿ ಕಾರ್ಯಗಾರ ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ರಾಜ್ಯ ಬಾಲಭವನ ಸೊಸೈಟಿಯಿಂದ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ತರಬೇತಿ ಕಾರ್ಯಗಾರ ಆಯೋಜಿಸಲಾಗುತ್ತಿದ್ದು, 15 ದಿನಕಾಲ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಡೆಯಲಿದೆ. ಆಸಕ್ತರು ತಮ್ಮ ಮಕ್ಕಳ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಶಿಬಿರದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಕಸದಿಂದ ರಸ, ಸಮೂಹ ಸಂಗೀತ, ಸಮೂಹ ನೃತ್ಯ, ಯೋಗ, ಕರಾಟೆ, ಇತರೆ ಚಟುವಟಿಕೆಗಳು ನಡೆಯಲಿವೆ. ಕಾರ್ಯಗಾರದಲ್ಲಿ 5 ರಿಂದ 16 ವರ್ಷದೊಳಗಿನ ಸರಕಾರಿ ಶಾಲೆ ಮಕ್ಕಳು ಗ್ರಾಮೀಣ ಪ್ರದೇಶ ಹಾಗೂ ಸೌಲಭ್ಯ ವಂಚಿತ ಮಕ್ಕಳಿಗೆ ಸುಧಾರಣಾ ಸಂಸ್ಥೆಗಳ ಬಾಲಕರು, ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಬೇಸಿಗೆ ಶಿಬಿರದ ಚಟುವಟಿಕೆಗಳಲ್ಲಿ 60 ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ. ಆಸಕ್ತರು ತಮ್ಮ ಮಕ್ಕಳ ಹೆಸರನ್ನು ಮೇ 15, ಸಂಜೆ 5 ರೊಳಗಾಗಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಎಸ್‍ಪಿ ವೃತ್ತದ ಹತ್ತಿರವಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219, ಮೊ.9741965198 ಗೆ ಸಂಪರ್ಕಿಸಿಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ