ಶುಕ್ರವಾರ, ಮೇ 12, 2023

ಬಳ್ಳಾರಿ: ಕೆಕೆಆರ್‍ಟಿಸಿ ವಿಭಾಗದಿಂದ ಬೆಂಗಳೂರಿಗೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಮೇ 15 ರವರೆಗೆ ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಪ್ರಯುಕ್ತ ಮೇ 10 ರಂದು ಮತದಾನ ಮಾಡಲು ಬೆಂಗಳೂರು ಹಾಗೂ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ ಕಾರಣ, ಪುನಃ ಬೆಂಗಳೂರಿಗೆ ತೆರಳಲು ಬಳ್ಳಾರಿ ಕೇಂದ್ರಿಯ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಕ್ಕೆ ಅನುಕೂಲ ಮಾಡುವ ಸದುದ್ದೇಶದಿಂದ ಬಳ್ಳಾರಿ ವಿಭಾಗದಿಂದ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಮೇ 12 ರಿಂದ ಮೇ 15 ರವರೆಗೆ ಮಾಡಲಾಗಿದೆ. ಈ ವಿಶೇಷ ಬಸ್ಸುಗಳಿಗೆ ಆನ್ ಲೈನ್ ಮುಖಾಂತರವೂ ತಿತಿತಿ.ಞsಡಿಣಛಿ.iಟಿ ವೆಬ್‍ಸೈಟ್‍ಗೆ ಲಾಗ್-ಇನ್ ಆಗುವ ಮೂಲಕ ಮುಂಗಡ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ವಿಶೇಷ ಬಸ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ