ಸೋಮವಾರ, ಮೇ 15, 2023
ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ):
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಗುಗ್ಗರಹಟ್ಟಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಸಿ) ಯಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿಗೆ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ) ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪ ಸಂಖ್ಯಾತರ ಸಮುದಾಯಕ್ಕೆ ಶೇ.75 ಹಾಗೂ ಇತರೆ ಸಮುದಾಯಕ್ಕೆ ಶೇ.25 ರಷ್ಟು ಮೀಸಲಾತಿ ಇರುತ್ತದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಪಾಲಕರು ವಸತಿ ಶಾಲೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25 ರ ಸಂಜೆ 5.30 ರೊಳಗೆ ಅವಕಾಶ ಇರುತ್ತದೆ.
*ಅರ್ಹತೆಗಳು:* ವಿದ್ಯಾರ್ಥಿಗಳು ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ.75 ರವರೆಗೆ ಮೀಸಲಿರಿಸಿದೆ). ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ, ಸರ್ಕಾರಿ, ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10 ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷ ಮೀರಿರಬಾರದು. ವಿಕಲನಚೇತನರಿಗೆ ಶೇ.3 ರಷ್ಟು ಪ್ರವೇಶ ಮೀಸಲಿರಿಸಿದೆ. ಶೇ.25 ರಷ್ಟು ಸ್ಥಾನಗಳನ್ನು ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರವೇಶಕ್ಕೆ ಮೀಸಲಿರಿಸಲಾಗಿದೆ.
ಗುಗ್ಗರಹಟ್ಟಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ.8971171672 ಹಾಗೂ ನಿಲಯಪಾಲಕರ ಮೊ.7892632066 ಸಂಪರ್ಕಿಸಬಹುದು ಅಥವಾ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಸಂಕ್ಷಿಪ್ತ ಅಧಿಸೂಚನೆ ಮತ್ತು ವಿವರಗಳಿಗಾಗಿ http://dom.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದ ದೂ.08392-200125/224 ಅಥವಾ ಸಹಾಯವಾಣಿ ಕೇಂದ್ರ 8277799990 (24*7) ಗೆ ಸಂಪರ್ಕಿಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಅಂಜಿನಪ್ಪ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ