ಮಂಗಳವಾರ, ಮೇ 16, 2023

ಅರ್ಜಿ ಅವಧಿ ವಿಸ್ತರಣೆ ಬಳ್ಳಾರಿ,ಮೇ 16 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನೀಡಲಾಗುವ 10 ತಿಂಗಳ ತೋಟಗಾರಿಕೆ ತರಬೇತಿ ಪಡೆಯಲು ಅರ್ಹ ರೈತ ಮಕ್ಕಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಮೇ 22 ರಂದು ಸಂಜೆ 05.30 ರೊಳಗೆ ಸಲ್ಲಿಸಬೇಕು. ಸಂದರ್ಶನ ನಡೆಯುವ ದಿನ ಮೇ 25. ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದು ಹಾಗೂ ಪ್ರವೇಶ ಪತ್ರ ನೀಡುವ ದಿನ ಮೇ 29. ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಿರ್ದೇಶನಾಲಯಕ್ಕೆ ಕಳುಹಿಸುವ ದಿನ ಮೇ 30. ಅಭ್ಯರ್ಥಿಗಳು ತರಬೇತಿಗೆ ಹಾಜರಾಗುವ ದಿನ ಜೂನ್ 01 ರಿಂದ ಆಗಿರುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಸೂಚಿಸಿದೆ. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪಿ.ಭೋಗಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ