ಶನಿವಾರ, ಮೇ 6, 2023
ಅಪ್ರೆಂಟಿಸ್ ತರಬೇತಿ: ಮೇ 16 ರಂದು ಕ್ಯಾಂಪಸ್ ಸಂದರ್ಶನ*
ಬಳ್ಳಾರಿ.ಮೇ 05(ಕರ್ನಾಟಕ ವಾರ್ತೆ):
ಬೆಂಗಳೂರಿನ ಟೊಯೋಟ, ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ (ಂಠಿಠಿಠಿಡಿeಟಿಣiಛಿe) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಮೇ 16ರಂದು ಬೆಳಗ್ಗೆ 9 ಕ್ಕೆ ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಿಲಾಗಿದೆ.
ಎರಡು ವರ್ಷಗಳ ಐಟಿಐ ತರಬೇತಿಯಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಅಂತಿಮ ವರ್ಷದ ತರಬೇತಿದಾರರು ಹಾಗೂ ಐ.ಟಿ.ಐ ಪಾಸಾದವರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬಹುದು.
ತರಬೇಕಾದ ದಾಖಲೆಗಳು: ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್‍ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ತರಬೇಕು.
ಮೇ 16ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದ್ದು, ಮೇ 17 ರಂದು ವೈದ್ಯಕೀಯ ಪರೀಕ್ಷೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕ್ಯಾಂಪಸ್ ನಿಯೋಜನೆ ಅಧಿಕಾರಿ ಅವರ ಮೊ.9741183501 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗವಿಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ