ಶುಕ್ರವಾರ, ಮೇ 12, 2023
ತೆಕ್ಕಲಕೋಟೆ, ಕರೂರು ವಿದ್ಯುತ್ ವಿತರಣಾ ಕೇಂದ್ರ; ವಿದ್ಯುತ್ ಕಡಿತ ಮೇ 17 ರಂದು
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ತೆಕ್ಕಲಕೋಟೆ ಮತ್ತು ಕರೂರು ವಿದ್ಯುತ್ ವಿತರಣಾ ಕೇಂದ್ರದ ಹಾಗೂ ಮಾರ್ಗದ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 17 ರಂದು ಬೆಳಗ್ಗೆ 10 ರಿಂದ ಸಂಜೆ 06 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವಿ ಸಿಂಧು.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು: 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ತೆಕ್ಕಲಕೋಟೆಯ ಬಲಕುಂದಿ, ಉಡೆಗೋಳ, ಹಳೆಕೋಟೆ ಮತ್ತು ತೆಕ್ಕಲಕೋಟೆ ಪಟ್ಟಣ ಇತ್ಯಾದಿ. 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಕರೂರು ವ್ಯಾಪ್ತಿಯ ದರೂರು, ಕರೂರು, ಗೋಸುಬಾಳೆ, ಮಾಟಸುಗುರ್, ಉತ್ತನೂರು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ರೈತರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ