ಶುಕ್ರವಾರ, ಮೇ 12, 2023
ಲೋಕಾಯುಕ್ತ ವಿಭಾಗದಿಂದ ಸಾರ್ವಜನಿಕರ ಕುಂದುಕೊರತೆ ಆಹವಾಲು ಸ್ವೀಕಾರ ಮೇ 17 ರಂದು
ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಪೆÇಲೀಸ್ ಉಪಾಧೀಕ್ಷಕರಾದ ಕೆ.ರಾಮರಾವ್, ಪೆÇಲೀಸ್ ನಿರೀಕ್ಷಕರಾದ ಮಹಮ್ಮದ್ ರಫಿ, ಸಂಗಮೇಶ್ ಇವರ ನೇತೃತ್ವದಲ್ಲಿ 2023 ನೇ ಮೇ ತಿಂಗಳಲ್ಲಿ ಬಳ್ಳಾರಿ ನಗರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ ಸಭೆಯನ್ನು ಮೇ 17 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಬಳ್ಳಾರಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲಾಗುತ್ತದೆ.
ಸಾರ್ವಜನಿಕರು, ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.1 ಮತ್ತು 02 ಗಳನ್ನು ಸಹ ನೀಡಲಾಗುವುದು.
ಕುಂದುಕೊರತೆಗಳಿರುವ ಸಾರ್ವಜನಿಕರು ನಿಗದಿತ ಸ್ಥಳ ಮತ್ತು ದಿನದಂದು ನಡೆಯುವ ಸಭೆ ಭಾಗವಹಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ