ಸೋಮವಾರ, ಮೇ 15, 2023
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 17 ರಂದು
ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿನ 220/110/11ಕೆ.ವಿಯ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11 ಕೆ.ವಿ ಮಾರ್ಗಗಳಲ್ಲಿ ಕೆ.ಹೆಚ್.ಬಿ ಲೈನ್ ಹೊಸ ಮಾರ್ಗದ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 17 ರಂದು ಬೆಳಗ್ಗೆ 10 ರಿಂದ ಸಂಜೆ 06 ರವರೆಗೆ ಎಫ್-39 ಫೀಡರ್‍ನ ಅಲ್ಲಿಪುರ ನಗರ ಪ್ರದೇಶದ ಅಲ್ಲಿಪುರ, ಬೈ ಪಾಸ್ ರಸ್ತೆ ಹಾಗೂ ಎಫ್-31 ಫೀಡರ್‍ನ ಕೊಳಗಲ್ ಮಾರ್ಗದ ಕೊಳಗಲ್ಲು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ