ಬುಧವಾರ, ಮೇ 17, 2023
ಅರ್ಜಿ ಆಹ್ವಾನ
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮೇ 25 ರೊಳಗೆ ಸಲ್ಲಿಸಬೇಕು. ಡಯಟ್ ಮೂಲಕ ಪ್ರವೇಶ ಪರೀಕ್ಷೆ ಜೂನ್ 01 ರಂದು ನಡೆಯುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ