ಗುರುವಾರ, ಮೇ 18, 2023

ಜೆಎಸ್‍ಎಸ್ ವಿಶೇಷಚೇತನ ಪಾಲಿಟೆಕ್ನಿಕ್: ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ಬಳ್ಳಾರಿ,ಮೇ 18(ಕರ್ನಾಟಕ ವಾರ್ತೆ): 2023-24ನೇ ಸಾಲಿಗೆ ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‍ನಲ್ಲಿ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. *ಅನುದಾನಿತ ಕೋರ್ಸುಗಳು:* ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೋರ್ಸು. *ಅನುದಾನ ರಹಿತ ಕೋರ್ಸುಗಳು:* ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸು. ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ಅಂಕಗಳೊಂದಿಗೆ ತೇರ್ಗಡೆ ಹಾಗೂ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು. ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ಶೇ.60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್ ಹೊಂದಿರಬೇಕು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯವಿದೆ. ಅರ್ಜಿಗಳನ್ನು www.jsspda.org ವೆಬ್‍ಸೈಟ್‍ನಲ್ಲಿ ಪಡೆದುಕೊಳ್ಳಬಹುದು ಅಥವಾ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವಿಳಾಸದ ಹೆಸರಿನೊಂದಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಹಾಗೂ ಪ.ಜಾತಿ, ಪ.ಪಂ, ಇತರೆ ವರ್ಗದವರಿಗೆ ರೂ. 50 ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು. ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 17 ರೊಳಗೆ ಕಚೇರಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9844644937 ಗೆ ಸಂಪರ್ಕಿಸಬಹುದು ಎಂದು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ