ಶುಕ್ರವಾರ, ಮೇ 19, 2023

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಂದುಕೊರತೆ ನಿವಾರಣಾ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳ ನೇಮಕ: ಅರ್ಜಿ ಆಹ್ವಾನ ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ) ಅಧಿನಿಯಮ 2014 ರಲ್ಲಿನ 20ನೇ ಪ್ರಕರಣದ 1ನೇ ಉಪ ಪ್ರಕರಣದ ಅಡಿಯಲ್ಲಿ ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ) ಅಧಿನಿಯಮ 2019 ರ ಅಧ್ಯಾಯ 3ರ ಕಲಂ ಸಂಖ್ಯೆ 18ರನ್ವಯ ರಚಿಸಲಾದ ಕುಂದು ಕೊರತೆ ನಿವಾರಣಾ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಅರೆಕಾಲಿಕ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಎಸ್.ಎನ್.ರುದ್ರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತಿಯುಳ್ಳವರು ಮೇ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. *ಅಧ್ಯಕ್ಷರ ಹುದ್ದೆಯ ಅರ್ಹತೆ:* ನಿವೃತ್ತ ಸಿವಿಲ್ ನ್ಯಾಯಾಧೀಶರು (Retired Civil Judge) ಆಗಿರಬೇಕು, ವಯೋಮಿತಿ 65 ವರ್ಷದೊಳಗಿರಬೇಕು. *ಸದಸ್ಯರುಗಳು ಸ್ಥಾನಗಳ ಅರ್ಹತೆ:* ಒಂದು ಸದಸ್ಯ ಸ್ಥಾನಕ್ಕೆ ಸ್ಥಳೀಯ ಪ್ರದೇಶದ ಕಳಂಕರಹಿತ ಸೇವಾ ದಾಖಲೆಯುಳ್ಳ ರಾಜ್ಯ ಸರ್ಕಾರದ ನಿವೃತ್ತ ‘ಎ’ ದರ್ಜೆಯ ಅಧಿಕಾರಿಯಾಗಿರಬೇಕು. ಇನ್ನೊಂದು ಸದಸ್ಯ ಸ್ಥಾನಕ್ಕೆ ಸ್ಥಳೀಯ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರವನ್ನು ಒಳಗೊಂಡ ಅನೌಪಚಾರಿಕ ಆರ್ಥಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಪ್ರಖ್ಯಾತ ಸಾಮಾಜಿಕ ಕಾರ್ಯಕರ್ತರಾಗಿರಬೇಕು. ವಯೋಮಿತಿ 65 ವರ್ಷದೊಳಗಿರಬೇಕು. *ಸಂಭಾವನೆ:* ಸಮಿತಿಯ ಅಧ್ಯಕ್ಷರಿಗೆ ಪ್ರತಿಬಾರಿಯ ಉಪವೇಶನಕ್ಕೆ 2500 ರೂ. ಗಳ ಗೌರವಧನವನ್ನು ಸರ್ಕಾರದಿಂದ ನಿಗಧಿಪಡಿಸಲಾಗಿರುತ್ತದೆ. ಸಮಿತಿಯ ಸದಸ್ಯರುಗಳಿಗೆ ಪ್ರತಿಬಾರಿಯ ಉಪವೇಶನಕ್ಕೆ 1000 ರೂ. ಗಳ ಗೌರವಧನವನ್ನು ಸರ್ಕಾರದಿಂದ ನಿಗಧಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ವಲಯ ಕಚೇರಿ-2ರ (ಹಳೇ ಕಛೇರಿ ಕಟ್ಟಡ) ಡೇ-ನಲ್ಮ್ ಶಾಖೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಅಥವಾ ದೂ.08392-273479 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ