ಶನಿವಾರ, ಮೇ 20, 2023
ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿ ಹಿನ್ನಲೆ
ಕಾಮಗಾರಿ ಪ್ರದೇಶ ಸುತ್ತ-ಮುತ್ತ ಪ್ರತಿಬಂಧಕಾಜ್ಞೆ ಜಾರಿ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ತಾಲೂಕಿನ ಮೋಕಾ ಹೋಬಳಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿ ನಡೆಯುವ ಸ್ಥಳದ ಸುತ್ತ-ಮುತ್ತಲಿನ ಪ್ರದೇಶವನ್ನು ಸಿಆರ್‍ಪಿಸಿ ಕಾಯ್ದೆ 1973 ಕಲಂ 144 ರನ್ವಯ ಮೇ 27 ರವರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಬಳ್ಳಾರಿ ತಾಲೂಕು ದಂಡಾಧಿಕಾರಿಯಾಗಿರುವ ತಹಶೀಲ್ದಾರ ಬಲರಾಮ ಕಟ್ಟಿಮನಿ ಅವರು ಪ್ರತಿಬಂಧಕಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಮೋಕಾ ಠಾಣಾ ವ್ಯಾಪ್ತಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್ ಕಾಮಗಾರಿಯು ನಡೆಯುತ್ತಿದ್ದು, ಕಾಮಗಾರಿ ಸಮಯದಲ್ಲಿ ಬ್ಯಾಲಚಿಂತೆ ಮತ್ತು ಬಿಡಿ ಹಳ್ಳಿ ಗ್ರಾಮಗಳ ಗ್ರಾಮಸ್ಥರು ಹಾಗೂ ಮಹಿಳೆಯರು ಪ್ರತಿಭಟನೆ ಮಾಡುವ ಹಾಗೂ ಕಾಮಗಾರಿಗೆ ತೊಂದರೆ (ಆಡಚಣೆ) ಮಾಡಿ ಕಾನೂನು ಸುವ್ಯವಸ್ಥೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿಂದ ನಿರ್ಭಂಧಿತ ಪ್ರದೇಶವೆಂದೂ ಘೋಷಿಸಲಾಗಿದೆ. ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಷರತ್ತು ವಿಧಿಸಲಾಗಿದೆ.
*ಷರತ್ತುಗಳು:* ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯ ಬ್ಯಾಲಚಿಂತೆ ಮತ್ತು ಬಿ.ಡಿ.ಹಳ್ಳಿಯ ಮಧ್ಯದಲ್ಲಿ ಬರುವ ವೇದಾವತಿ ನದಿಯ ಬ್ರಿಡ್ಜ್‍ನ ಕಾಮಗಾರಿ ನಡೆಯುವ ಸ್ಥಳದ ಸುತ್ತ-ಮುತ್ತ ಪ್ರದೇಶದಲ್ಲಿ 05 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿμÉೀಧಿಸಿದೆ.
ಶಸ್ತ್ರ, ಬಡಿಗೆ, ಬರ್ಚ್, ಖಡ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು ಕಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿμÉೀಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ತಾನನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.
ಯಾವುದೇ ವ್ಯಕ್ತಿ ಅಥವಾ ಸಾರ್ವಜನಿಕರಾಗಲೀ ಮೇಲೆ ವಿವರಿಸಿದ ಮಾರಕಾಸ್ತ್ರಗಳು ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳುವ ಅಧಿಕಾರ ಯಾವುದೇ ಪೆÇಲೀಸ್ ಅಧಿಕಾರಿಗಳಿಗೆ ಇರುತ್ತದೆ. ಅಂದರೆ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗಲು ಮಾಡಿಕೊಳ್ಳಲಾಗುವುದು.
ಈ ಆದೇಶವು ಶವ ಸಂಸ್ಕಾರಕ್ಕೆ ಅಥವಾ ಮದುವೆ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ