ಶುಕ್ರವಾರ, ಮೇ 12, 2023
ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ,
ಮತ ಎಣಿಕೆ ಕೇಂದ್ರ ಸುತ್ತ 200 ಮೀ ವ್ಯಾಪ್ತಿ ನಿರ್ಬಂಧಿತ ಪ್ರದೇಶ ಘೋಷಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶ
ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನಲೆಯಲ್ಲಿ ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ 13 ರಂದು ನಗರದ ರಾವ್ ಬಹದ್ದೂರ್ ವೈ ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈಗಾಗಲೇ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಲಾಗಿದ್ದು, ಮೇ 13 ರ ಬೆಳಗ್ಗೆ 06 ರಿಂದ ಮೇ 14 ರಂದು ಮಧ್ಯಾಹ್ನ 12 ರವರೆಗೆ ಸಿಆರ್‍ಪಿಸಿ 1973 ಕಲಂ 144 ಮತ್ತು 144 (ಎ) ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಆದೇಶಿಸಿದ್ದು, ಉಳಿದಂತೆ ಪ್ರತಿಬಂಧಕಾಜ್ಞೆ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ