ಸೋಮವಾರ, ಮೇ 8, 2023

ಕರ್ನಾಟಕ ವಿಧಾನಸಭಾ ಚುನಾವಣೆ-2023 ಮತದಾನ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶ ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನಲೆಯಲ್ಲಿ ಮೇ 15 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಮೇ 10 ರಂದು ನಡೆಯುವ ಮತದಾನ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 08 ರ ಸಂಜೆ 06 ರಿಂದ ಮತದಾನ ಮುಕ್ತಾಯವಾಗುವವರೆಗೆ ಸಿಆರ್‍ಪಿಸಿ 1973 ರ ಕಲಂ 144 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ. ಮತದಾರರಿಗೆ ವಿವಿಧ ಆಸೆ-ಆಮಿಷಗಳಿಗೆ ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ವರ್ತಿಸಲು ಪ್ರೇರೇಪಿಸುವುದು, ಮತಗಟ್ಟೆ ಕೇಂದ್ರಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆ ತರುವುದು, ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಮತದಾನ ಪಾವಿತ್ರ್ಯತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ. *ಷರತ್ತುಗಳು:* ಪ್ರತಿಬಂಧಕಾಜ್ಞೆ ಅನ್ವಯ ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿμÉೀಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿμÉೀಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿಭರ್ಂದಿಸಿದೆ. ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮತ್ತು ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿಬರ್ಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿμÉೀಧಿಸಿದೆ. ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ ಹಾಗೂ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿμÉೀಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲೀ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು. ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀಟರ್ ಅಂತರದಲ್ಲಿ (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ) ಮೊಬೈಲ್ ಫೆÇೀನ್, ಕಾರ್ಡ್‍ಲೆಸ್ ಫೆÇೀನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ. ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೆÇೀಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. *ಮತದಾರರಲ್ಲದವರು ಕ್ಷೇತ್ರ ಬಿಟ್ಟು ಹೊರಡಿ:* ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಲ್ಲದವರು, ಕ್ಷೇತ್ರದಿಂದ ಹೊರಗೆ ತೆರಳಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‍ಗಳು ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ