ಶುಕ್ರವಾರ, ಮೇ 12, 2023

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣದೊಂದಿಗೆ ಪ್ರವೇಶ ನಿಷಿದ್ಧ ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮೇ 13 ರಂದು ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅಥವಾ ಏಣಿಕಾ ಏಜೆಂಟರು ಮೊಬೈಲ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ವಾಚ್ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತ ಎಣಿಕೆ ಕೇಂದ್ರದ ವ್ಯಾಪ್ತಿಯ ಒಳಗಡೆ ನಿμÉೀಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ. ಮತ ಎಣಿಕೆ ಕೇಂದ್ರದಲ್ಲಿ ಈಗಾಗಲೇ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಭದ್ರತಾ ಕೊಠಡಿಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿ ನಿಬರ್ಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಈಗಾಗಲೇ ಸಿ.ಆರ್.ಪಿ.ಸಿ 1973 ರ ಕಲಂ 144 ರಡಿ 200 ಮೀಟರ್ ವ್ಯಾಪ್ತಿಯಲ್ಲಿ ನಿμÉೀಧಾಜ್ಞೆ ಜಾರಿಗೊಳಿಸಿದೆ. ಮೇ 13 ರ ಮತ ಎಣಿಕೆ ದಿನದಂದು ಜಿಲ್ಲೆಯ ಒಟ್ಟು 05 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 300 ಜನ ಸಿಬ್ಬಂದಿಗಳನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿ ಆದೇಶಿಸಲಾಗಿದೆ. ರಾವ್ ಬಹದ್ದೂರ್ ವೈ ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ಕೇಂದ್ರವಾಗಿದ್ದು, ಪ್ರಾರಂಭದಲ್ಲಿ ಪೆÇಸ್ಟಲ್ ಬ್ಯಾಲೆಟ್ ಮತ ಎಣಿಕೆ ನಂತರದಲ್ಲಿ ವಿ.ವಿ.ಎಂ ಯಂತ್ರದ ಮತ ಎಣಿಕೆ ಕೈಗೊಳ್ಳಲಾಗುತ್ತದೆ. ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳ, ಮತ ಎಣಿಕೆ ಕೊಠಡಿಗಳಲ್ಲಿ ಮತ ಎಣಿಕೆ ಟೇಬಲ್‍ವಾರು ಸಿಸಿ ಕ್ಯಾಮರಗಳನ್ನು ಅಳವಾಡಿಸಲಾಗಿದೆ. ಮತ ಕೇಂದ್ರಗಳ ಭದ್ರತೆಗಾಗಿ ರಾಜ್ಯ ಪೆÇಲೀಸ್ ಮತ್ತು ಸಿಆರ್‍ಪಿಎಫ್ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಸುತ್ತುವಾರು ಎಣಿಕೆಯ ಫಲಿತಾಂಶವನ್ನು ಘೋಷಿಸುವ ನಿಮಿತ್ತ, ಮತ ಎಣಿಕೆ ಕೇಂದ್ರದ ಆವರಣದಲ್ಲಿನ ಕಟ್ಟಡವೊಂದರಲ್ಲಿ ಪ್ರತ್ಯೇಕ ಕೊಠಡಿಯನ್ನು ಮಾಧ್ಯಮದವರಿಗಾಗಿ ಕಾಯ್ದಿರಿಸಲಾಗಿದೆ. ಮೇ.10 ರಿಂದಲೇ ಮತ ಎಣಿಕೆ ಕೇಂದ್ರದಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿ, ಮಾಧ್ಯಮದವರನ್ನು ಹೊರತುಪಡಿಸಿ ಇತರರಿಗೆ ಪ್ರವೇಶಿಸಲು ಅವಕಾಶ ನಿμÉೀಧಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅಥವಾ ಏಣಿಕಾ ಏಜೆಂಟರು ಮೊಬೈಲ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ವಾಚ್ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತ ಎಣಿಕೆ ಕೇಂದ್ರದ ವ್ಯಾಪ್ತಿಯ ಒಳಗಡೆ ನಿμÉೀಧಿಸಲಾಗಿದೆ. ಚುನಾವಣಾ ಅಭ್ಯರ್ಥಿಗಳು ಹಾಗೂ ಅವರ ಅಧಿಕೃತ ಏಜೆಂಟರು ಮತ್ತು ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಎಲ್ಲಾ ಸಾರ್ವಜನಿಕರು ಮತ್ತು ಅವರ ವಾಹನಗಳಿಗೆ ಮತ ಎಣಿಕೆ ಕೇಂದ್ರದ ಕಾಲೇಜಿನ ಆವರಣದಲ್ಲಿ ನಿರ್ಬಂಧ ವಿಧಿಸಲಾಗಿದೆ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯ ಒಳಗಡೆ ಕಲಂ 144 ಜಾರಿಯಿದ್ದು, ಯಾವುದೇ ಅಪಾಯಕಾರಿ ಆಯುಧ, ವಸ್ತುಗಳನ್ನು ನಿμÉೀಧಿಸಲಾಗಿದೆ. ಮತ ಎಣಿಕೆ ಕಾರ್ಯವು ಶಾಂತಿಯುತವಾಗಿ ಜರುಗಲು ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ