ಶನಿವಾರ, ಮೇ 20, 2023

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 22 ರಂದು ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿನ 110/11ಕೆ.ವಿ ಮೀನಹಳ್ಳಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಮೆ.ಎ-ಒನ್ ಗೋಲ್ಡ್ ಪೈಪ್ಸ್ ಮತ್ತು ಟ್ಯೂಬ್ಸ್ ಕಾರ್ಖಾನೆಗೆ ಹೊಸ ಎಕ್ಸ್‍ಪ್ರೆಸ್ 11ಕೆ.ವಿ ಮಾರ್ಗದ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 04 ರಿಂದ ಈ ಮಾರ್ಗದ 11 ಕೆವಿ ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು: ಎಫ್-2 ಫೀಡರ್‍ನ ಚಾಗನೂರು ಐಪಿ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಕೃಷಿ ಪ್ರದೇಶ. ಎಫ್-1 ಫೀಡರ್‍ನ ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಗ್ರಾಮಗಳು ಹಾಗೂ ಮೆ. ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ