ಸೋಮವಾರ, ಮೇ 22, 2023
ಮೇ 23 ರಿಂದ ಜೂನ್ 03 ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ
ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮೊಹಮ್ಮದ್ ಝುಬೇರಾ ಸೂಚನೆ
ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ):
ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಿಂದ ಜೂನ್ 03 ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ದ್ವಿತೀಯ ಪಿಯು ಪೂರಕ ಪರೀಕ್ಷೆಗಳ ಸಿದ್ಧತೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್, ಎಎಸ್‍ಎಮ್ ಬಾಲಕಿಯರ ಪಿಯು ಕಾಲೇಜ್, ವಾಡ್ರ್ಲಾ ಪಿಯು ಕಾಲೇಜ್, ಎಸ್‍ಜಿ ಪಿಯು ಕಾಲೇಜ್, ಸಿರುಗುಪ್ಪದ ಎಸ್‍ಇಎಸ್ ಪಿಯು ಕಾಲೇಜ್ ಹಾಗೂ ಸಂಡೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸೇರಿ ಒಟ್ಟು 06 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿವೆ ಎಂದರು.
ಆಯಾ ಪರೀಕ್ಷಾ ಕೇಂದ್ರದ ಕಾಲೇಜಿನ ಪ್ರಾಚಾರ್ಯರು ಪರೀಕ್ಷೆಗೆ ಮುಖ್ಯ ಅಧೀಕ್ಷಕರಾಗಿರುತ್ತಾರೆ. ಯಾವುದೇ ಪರೀಕ್ಷಾ ಆಕ್ರಮಗಳಿಗೆ ಆಸ್ಪದವಿಲ್ಲದಂತೆ ಹಾಗೂ ಶಿಸ್ತುಬದ್ಧವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಯಾವುದೇ ತರಹದ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಸ್ಮಾರ್ಟ್ ವಾಚ್, ಸೈಂಟಿಫಿಕ್ ಕ್ಯಾಲ್ಕುಲೇಟರ್, ಬ್ಲೂ-ಟೂತ್, ಪೇಜರ್ ಇತ್ಯಾದಿ ಉಪಕರಣಗಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದ ಜೊತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕು ಎಂದು ಹೇಳಿದರು.
ಗೌಪ್ಯ ಬಂಡಲ್‍ಗಳನ್ನು ಸಾಗಿಸುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸೂಕ್ತ ಪೆÇಲೀಸ್ ಬೆಂಗಾವಲನ್ನು ನೀಡಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಬಂದೋಬಸ್ತ್ ಕಾರ್ಯಕ್ಕಾಗಿ ಸೂಕ್ತ ಪೆÇಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ, ಬೇರೆ ಯಾವ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಿಸಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೆಂಕಟ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ