ಸೋಮವಾರ, ಮೇ 22, 2023

ಮೇ 23 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದ ಎಫ್-24 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 23 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ನಗರದ ಬೆಂಗಳೂರು ರಸ್ತೆ, ರಾಣಿ ತೋಟ, ಬಾಪೂಜಿ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ