ಮಂಗಳವಾರ, ಮೇ 23, 2023

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 24 ರಂದು ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಹೊಸ ಬ್ಯಾಂಕ್-4 ಅಳವಡಿಸುವ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮೇ 24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:* ಎಫ್-39 ಅಲ್ಲಿಪುರ ನಗರಪ್ರದೇಶ ಫೀಡರ್ ಮಾರ್ಗದ ಅಲ್ಲಪುರ ಗ್ರಾಮ, ಬೈ ಪಾಸ್ ರೋಡ್. ಎಫ್-74 ಗೌತಮ್ ನಗರ ಎನ್.ಜೆ.ವೈ ಫೀಡರ್ ಮಾರ್ಗದ ಡಿಸಿ ನಗರ, ಪ್ರ್ರಶಾಂತ ನಗರ, ಆಲದಹಳ್ಳಿ ಗ್ರಾಮ. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ