ಗುರುವಾರ, ಮೇ 25, 2023

ಸರ್ಕಾರಿ ಪಾಲಿಟೆಕ್ನಿಕ್; ಡಿಪ್ಲೋಮಾ ಕೋರ್ಸ್‍ಗಳಿಗೆ ಖಾಲಿ ಉಳಿದ ಸೀಟ್‍ಗಳ ಭರ್ತಿಗಾಗಿ ಅರ್ಜಿ ಆಹ್ವಾನ ಬಳ್ಳಾರಿ,ಮೇ 25(ಕರ್ನಾಟಕ ವಾರ್ತೆ): ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ 2023-24 ನೇ ಸಾಲಿನ ಪ್ರಥಮ ಡಿಪ್ಲೋಮಾ ಕೋರ್ಸ್‍ಗಳಿಗೆ ಈಗಾಗಲೇ ಆನ್‍ಲೈನ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಖಾಲಿ ಉಳಿದ ಸೀಟ್‍ಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 29 ರಿಂದ ಜೂ.02 ರ ಮಧ್ಯಾಹ್ನ 03 ರವರೆಗೆ ನಡೆಯಲಿದೆ. ಅದೇ ದಿನ ಸಂಜೆ 04 ರಂದು ಸಂಸ್ಥೆಯಲ್ಲಿ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಜೂ.03 ರಂದು ಬೆಳಗ್ಗೆ 09 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಎಂದು ಸರ್ಕಾರಿ ಪಾಲಿಟೆಕ್ನಿಕ್‍ನÀ ಪ್ರಾಚಾರ್ಯೆ ಡಿ.ಟಿ.ದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ