ಮಂಗಳವಾರ, ಮೇ 23, 2023

ವಿಶ್ವ ಸ್ಕಿಜೋಪ್ರೇನಿಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಮೇ 25 ರಂದು ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಡಿಯಲ್ಲಿ ‘ವಿಶ್ವ ಸ್ಕಿಜೋಪ್ರೆನಿಯ ದಿನಾಚರಣೆ’ ಅಂಗವಾಗಿ ‘ಸಮಾಜದ ದಯಾಳುತನದ ಶಕ್ತಿಯನ್ನು ಆಚರಿಸುವುದು’ ಎಂಬ ಘೋಷವಾಕ್ಯದೊಂದಿಗೆ ಮೇ 25 ರಂದು ಬೆಳಗ್ಗೆ 09.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ