ಶುಕ್ರವಾರ, ಮೇ 26, 2023

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ನಗರದ ರೈಲ್ವೇ ನಿಲ್ದಾಣದ ವೇದಿಕೆ ನಂ.1 ಕ್ಕೆ ಅಂಟಿಕೊಂಡಿರುವ ವಿಚಾರಣೆಯ ಕೊಠಡಿಯ ಮುಂದೆ ಸುಮಾರು 45 ವರ್ಷದ ಅನಾಮಧೇಯ ವ್ಯಕ್ತಿಯು ಮೇ 26 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು. ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ತೆಳುವಾದ ಮೈಕಟ್ಟು, ಸಾಧಾರಣ ಕಪ್ಪು ಮೈಬಣ್ಣ, ಕೋಲು ಮುಖ, ಅಗಲವಾದ ಹಣೆ, ನೆಟ್ಟನೆಯ ಮೂಗು ಹೊಂದಿದ್ದು, ತಲೆಯಲ್ಲಿ ಸುಮಾರು ಮೂರು ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮತ್ತು ಕಪ್ಪು ಮಿಶ್ರಿತ ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಮೃತನ ಮೈ ಮೇಲಿನ ಬಟ್ಟೆಗಳು: ಬಿಳಿಯ ಬಣ್ಣದ ಆಫ್ ಟಿ-ಶರ್ಟ್, ಪಾಚಿ ಹಸಿರು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೆÇಲೀಸ್ ಠಾಣೆಯ ಉಪ ನಿರೀಕ್ಷಕರ ಮೊ.9480802131, ರಾಯಚೂರು ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471 ಗೆ ಸಂಪರ್ಕಿಸಬಹುದು ಎಂದು ರೈಲ್ವೇ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ