ಸೋಮವಾರ, ಮೇ 29, 2023

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ನಗರದ ಹೊಸಪೇಟೆ ರಸ್ತೆಯ ಮೊದಲನೇ ರೇಲ್ವೆ ಗೇಟಿನ ಹತ್ತಿರ ಬಸ್‍ಸ್ಟಾಪ್ ಪಕ್ಕದ ಕಸದಲ್ಲಿ ಸುಮಾರು 50 ರಿಂದ 55 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥನಾಗಿ ಬಿದ್ದಿದ್ದು, ವಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಗಿರುತ್ತದೆ. ಚಿಕಿತ್ಸೆ ಫಲಿಸದೇ ಮೇ 25 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್‍ಬಜಾರ್ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಚಹರೆ ಗುರುತು: ತೆಳುವಾದ ಮೈಕಟ್ಟು, ಸಾಧಾರಣ ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಮೈಮೇಲೆ ಒಂದು ಬಿಳಿ ಬಣ್ಣದ ಟಿ-ಶರ್ಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಕೌಲ್‍ಬಜಾರ್ ಠಾಣೆಯ ಪಿ.ಐ ಮೊ.9480803047, ಪಿಎಸ್‍ಐ ಮೊ.9480803084 ಗೆ ಸಂಪರ್ಕಿಬಹುದು ಎಂದು ಸಹಾಯಕ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ