ಮಂಗಳವಾರ, ಮೇ 30, 2023

ವ್ಯಕ್ತಿ ಕಾಣೆ ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಕುಡತಿನಿ ಪೊಲೀಸ್ ಠಾಣೆಯ ವ್ಯಾಪ್ತಿಯ ಶ್ರೀರಾಮರಂಗಾಪುರ ಗ್ರಾಮದ ನಿವಾಸಿಯಾದ ಮಂಜುನಾಥ.ಆರ್ ಎನ್ನುವ 30 ವರ್ಷದ ವ್ಯಕ್ತಿಯು ಮೇ.11 ರಂದು ಕಾಣೆಯಾಗಿರುವ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಬೆಕ್ಕಿನ ಕಣ್ಣು, ದೃಢವಾದ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲು ಇದ್ದು, ಕನ್ನಡ ಮತ್ತು ತೆಲುಗು ಭಾಷೆಯನ್ನು ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ಚೆಕ್ಸ್‍ವುಳ್ಳ ತುಂಬು ತೋಳಿನ ಶರ್ಟ್, ಗೋಧಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡತಿನಿ ಪೆÇಲೀಸ್ ಠಾಣೆ ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂ.08392-258100 ಗೆ ಸಂಪರ್ಕಿಸಬಹುದಾಗಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ