ಶುಕ್ರವಾರ, ಮೇ 26, 2023

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಮೇ 31 ರಂದು ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಅಂಗವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಹಾಗೂ ತಂಬಾಕು ಉತ್ಪನ್ನಗಳ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮೇ 31 ರಂದು ಬೆಳಗ್ಗೆ 09 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಚಾಲನೆ ನೀಡುವರು. ಜನಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಂಬಾಕು ಉತ್ಪನ್ನಗಳ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಎನ್‍ಟಿಸಿಪಿ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ