ಸೋಮವಾರ, ಮೇ 8, 2023
ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿಬರ್ಂಧ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 08ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ರವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125 ರಂತೆ ನಿಬರ್ಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿಬರ್ಂಧಿಸಲಾಗಿದೆ.
ಎಕ್ಸಿಟ್ ಪೆÇೀಲ್ ನಿμÉೀಧ:
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೆÇೀಲ್ ಪ್ರಸಾರ ಮಾಡುವುದನ್ನು ನಿμÉೀಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ