ಶುಕ್ರವಾರ, ಮೇ 19, 2023
ಪ್ರತಿಷ್ಠಿತ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅರ್ಜಿಗಳನ್ನು ಆಯಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಅಥವಾ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ, ಅರ್ಜಿಗಳನ್ನು ಮೇ 25 ರೊಳಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಮೊ.9740578247, 9986302091 ಹಾಗೂ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನಾ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ