ಬುಧವಾರ, ಮೇ 3, 2023

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮತದಾನ ಜಾಗೃತಿ ಅಭಿಯಾನ ಜಾಥಾ ದೇಶದ ಪ್ರಗತಿಗೆ ಎಲ್ಲರೂ ಮತದಾನ ಹಕ್ಕು ಚಲಾಯಿಸಿ: ನ್ಯಾ.ಪುμÁ್ಪಂಜಲಿ ದೇವಿ ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಪ್ರಧಾನ ಹಕ್ಕಾಗಿದ್ದು, ದೇಶದ ಪ್ರಗತಿಗೆ ಎಲ್ಲರೂ ತಮ್ಮ ಅಮೂಲ್ಯ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುμÁ್ಪಂಜಲಿ ದೇವಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ “ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ” ಎಂಬ ಘೋಷ ವಾಕ್ಯದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ದೇಶದ ಆರ್ಥಿಕ ಬಿಕ್ಕಟ್ಟನ್ನು ಸುಧಾರಿಸಲು ನಿμÁ್ಠವಂತ, ಪ್ರಾಮಾಣಿಕ ನಾಯಕರನ್ನು ಆರಿಸಬೇಕು. ಈ ನಿಟ್ಟಿನಲ್ಲಿ ಮತದಾರರು ಯಾವುದೇ ಹಣ, ಉಡುಗೊರೆ ಆಮಿಷಗಳಿಗೆ ಒಳಗಾಗದೆ ತಮ್ಮ ಮತವನ್ನು ಚಲಾಯಿಸಬೇಕು. ಯಾರೂ ಮತದಾನ ತಪ್ಪಿಸಬಾರದು ಎಂದು ಪುಷ್ಪಾಂಜಲಿ ದೇವಿ ಅವರು ಹೇಳಿದರು. ಮತದಾನ ಜಾಗೃತಿ ಅಭಿಯಾನದಲ್ಲಿ ಮತದಾನ ಕುರಿತು ಮಾಹಿತಿಯಿರುವ ಫಲಕಗಳನ್ನು ಹಿಡಿದುಕೊಂಡು ಮಹಿಳೆಯರು ಜಾಥಾದಲ್ಲಿ ಸಾಗಿದರು. ಮತದಾನ ಜಾಗೃತಿ ಅಭಿಯಾನ ಜಾಥಾವು ಜಿಲ್ಲಾ ನ್ಯಾಯಾಲಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದವರೆಗೆ ಸಾಗಿ ಬಂದಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ (ಉಸ್ತುವಾರಿ) ನ್ಯಾ.ಪವಿತ್ರ ಎಂ.ಬಿ, ಮುಖ್ಯ ಕಾನೂನು ರಕ್ಷಣಾ ಸಲಹೆಗಾರರಾದ ಎನ್.ಎಸ್.ಸುಧಾಕರ್, ನಜೀರುದ್ಧಿನ್.ಬಿ.ಕೆ, ಅಮರೇಶ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಸಿಡಿಪಿಒ ಉμÁ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಇತರರು ಭಾಗವಹಿಸಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ