ಶನಿವಾರ, ಮೇ 20, 2023
ಪಿ.ಎಂ ಕಿಸಾನ್ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಕಡ್ಡಾಯ - ಡಾ.ಎನ್.ಕೆಂಗೇಗೌಡ
ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ):
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲವೆಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಇಲಾಖೆಯಿಂದ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿರುವುದಿಲ್ಲ. ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದು ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಬಹುದು.
*ಈ ವಿಧಾನಗಳಲ್ಲಿಯೂ ಇ-ಕೆವೈಸಿ ಮಾಡಬಹುದು:* ತಮ್ಮ ಸಮೀಪದ ಗ್ರಾಮ, ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಫಲಾನುಭವಿಗಳು ಸ್ವತ: ತಾವೇ ಪಿ.ಎಂ ಕಿಸಾನ್ ಪೆÇೀರ್ಟೆಲ್ ಮೂಲಕ ಮೊಬೈಲ್ ಒಟಿಪಿ ಪಡೆದು ಇ-ಕೆವೈಸಿ ಮಾಡಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೆÇೀಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ-ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆಪ್ ಪ್ಲೇ ಸ್ಟೋರ್‍ನಲ್ಲಿ (Play Store) ಡೌನ್ ಲೋಡ್ (Download) ಮಾಡಿಕೊಂಡು ಆಪ್ ಮೂಲಕ ಸ್ವತ: ಫಲಾನುಭವಿಗಳೇ ಮುಖ ಚಹರೆ ತೋರಿಸುವ ಮೂಲಕ (Facial Authentication) ಇ-ಕೆವೈಸಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ