ಸೋಮವಾರ, ಮೇ 29, 2023

ಸಿರುಗುಪ್ಪ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಜೂ.03 ರಂದು ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 33/11 ಕೆ.ವಿ ರುದ್ರಪಾದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗದ ನಿರ್ವಹಣೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಜೂನ್ 03 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ರುದ್ರಪಾದ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವ ಪ್ರದೇಶಗಳು:* ಮಣ್ಣೂರು, ಸೂಗೂರು, ಮುದ್ದಟ್ಟನೂರು, ರುದ್ರಪಾದ, ನಡವಿ, ದೊಡ್ಡರಾಜ ಕ್ಯಾಂಪ್, ಮಡೆ ಕ್ಯಾಂಪ್, ಕವಳೆ ಬಸವೇಶ್ವರ ಕ್ಯಾಂಪ್, ಹಾವಿನಹಾಳ್, ಮಾಳಾಪುರ, ಚೆನ್ನಪಟ್ಟಣ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ