ಬುಧವಾರ, ಜೂನ್ 14, 2023
ಕಾನೂನು ಪದವೀಧರರಿಗೆ 2 ವರ್ಷದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಅರ್ಜಿ ಆಹ್ವಾನ
ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2 ವರ್ಷದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಪರಿಶಿಷ್ಟ ಜಾತಿಯ ಕಾನೂನು ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ದಾಖಲಾತಿಗಳ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳಿಂದ ಬೇಕಾಗುವ ದಾಖಲೆಗಳ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಅಂತಿಮ ವರ್ಷದ ಪದವಿ, ಎಲ್‍ಎಲ್‍ಬಿ 3 ವರ್ಷಗಳ ಮಾರ್ಕಸ್ ಕಾರ್ಡ್‍ಗಳು, ಬಾರ್ ಕೌನ್ಸಿಲ್ ನೋಂದಣಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್, 4 ಫೆÇೀಟೋ ದಾಖಲಾತಿಗಳ ಹೊಂದಿರಬೇಕು.
ಅರ್ಜಿಗಳನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 15 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ