ಬುಧವಾರ, ಜೂನ್ 28, 2023
ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ 2 ವರ್ಷದ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ.ಜೂ.28(ಕರ್ನಾಟಕ ವಾರ್ತೆ) :
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಎರಡು ವರ್ಷದ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 24 ಆಗಿರುತ್ತದೆ.
ಸಲ್ಲಿಸಿದ ಅರ್ಜಿಯ ಜೊತೆಗೆ ಇತರೆ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಥವಾ ಸಂಬಂಧಪಟ್ಟ ಆಯಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ